ಕುರುಗೋಡು ತಾಲೂಕಿನ ಯರಿಂಗಳಿಗಿ ಗ್ರಾಮದಲ್ಲಿ ಉಜ್ಜಯಿನಿ ಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಉತ್ಸವ ಜರುಗಿತು.
- ಜಗದ್ಗುರು ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯರ ಆಶೀರ್ವಚನ
- ಅಡ್ಡಪಲ್ಲಕ್ಕಿ ಕಾರ್ಯಕ್ರಮ
ಕುರುಗೋಡು: ದೇಶದ ಹೆಮ್ಮೆಯ ಪ್ರತೀಕ ಕೂಡು ಕುಟುಂಬ ಸಂಸ್ಕೃತಿ ಕಣ್ಮರೆಯಾಗಲು ದೂರದರ್ಶನ ಮತ್ತು ಮೊಬೈಲ್ ಬಳಕೆ ಪ್ರಮುಖ ಕಾರಣ ಎಂದು ಉಜ್ಜಯಿನಿ ಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯರು ಹೇಳಿದರು.
ಯರಿಂಗಳಿಗಿ ಗ್ರಾಮದಲ್ಲಿ ಮಂಗಳವಾರ ಉಜ್ಜಯಿನಿ ಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕುಟುಂಬದಲ್ಲಿ ಸೌಹಾರ್ದ ಮತ್ತು ಸಹಬಾಳ್ವೆ ಮೇಳೈಸಲು ಕೂಡು ಕುಟುಂಬದ ಸಂಸ್ಕೃತಿ ಪುನಃ ಆಚರಣೆಗೆ ಬರಬೇಕು. ತಂದೆ-ತಾಯಿಯನ್ನು ಪೂಜಿಸುವ, ಹಿರಿಯರನ್ನು ಗೌರವಿಸುವ ಗುಣಗಳನ್ನು ಇಂದಿನ ಮಕ್ಕಳಲ್ಲಿ ಬೆಳೆಸಬೇಕು. ಮಕ್ಕಳಿಗೆ ಸಂಸ್ಕಾರ ನೀಡಿ ಸನ್ಮಾರ್ಗದಲ್ಲಿ ನಡೆಸಬೇಕು ಎಂದರು. ಪೂರ್ಣ ಕುಂಭ, ಕಳಸ, ಡೊಳ್ಳು, ಭಜನೆ ವಿವಿಧ ಜನಪದ ವಾದ್ಯಮೇಳದೊಂದಿಗೆ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ನೆರವೇರಿತು.
ಎಮ್ಮಿಗನೂರಿನ ಹಂಪಿ ಸಾವಿರ ದೇವರ ಮಠದ ವಾಮದೇವ ಮಹಾಂತ ಶಿವಾಚಾರ್ಯರು, ಹರಗಿನಡೋಣಿಯ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಇತರರಿದ್ದರು.