ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕೆ ಕಾರಣದಾದ ಪ್ರೌಢಶಾಲೆಗಳ ಮುಖ್ಯಶಿಕ್ಷಕರನ್ನು ಸಿರಗುಪ್ಪದಲ್ಲಿ ಶಾಸಕ ಬಿ.ಎಂ.ನಾಗರಾಜ ಸನ್ಮಾನಿಸಿದರು. ತಹಸೀಲ್ದಾರ್ ಗೌಸಿಯಾ ಬೇಗಂ, ಬಿಇಒ ಎಚ್.ಗುರಪ್ಪ, ಬಿಆರ್‌ಸಿ ತಮ್ಮನಗೌಡ ಪಾಟೀಲ್, ಪ್ರೌಢ ಶಾಲಾ ಮುಖ್ಯಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಸ್.ಚಂದ್ರಮೌಳಿ, ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಂ.ಸುರೇಶ, ದೈಹಿಕ ಶಿಕ್ಷಣ ಶಿಕ್ಷಕರ ಪರಿವೀಕ್ಷಕ ರಮೇಶ, ಇಸಿಒ ಕೆ.ಜ್ಞಾನೇಶ್ವರ ಇದ್ದರು. 
ಬಳ್ಳಾರಿ

ಗುಣಮಟ್ಟದ ಕಲಿಕೆಯಿಂದ ಉತ್ತಮ ಫಲಿತಾಂಶ

ಶ್ರೀನಾಥ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಬಿ.ಎಂ.ನಾಗರಾಜ ಹೇಳಿಕೆ
  • ಸಿರಗುಪ್ಪ ಎಸ್ಸೆಸ್ಸೆಲ್ಸಿ ಅಭಿನಂದನಾ ಕಾರ್ಯಕ್ರಮ
ಸಿರಗುಪ್ಪ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದಾಗ ಇನ್ನೂ ಹೆಚ್ಚಿನ ಫಲಿತಾಂಶ ಪಡೆಯಲು ಸಾಧ್ಯ ಎಂದು ಶಾಸಕ ಬಿ.ಎಂ.ನಾಗರಾಜ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಹಾಗೂ ಸಹ ಶಿಕ್ಷಕರ ಸಂಘದಿಂದ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಾಲೂಕಿನ 5 ಸರ್ಕಾರಿ ಶಾಲೆಗಳು, 5 ಖಾಸಗಿ ಶಾಲೆಗಳು, 6 ವಸತಿ ಪ್ರೌಢಶಾಲೆಗಳು ಶೇ.100 ಫಲಿತಾಂಶ ಸಾಧಿಸಿವೆ. ಇದರಿಂದ ನಾವು ಜಿಲ್ಲೆಯಲ್ಲಿ 2ನೇ ಸ್ಥಾನ ಪಡೆದಿದ್ದೇವೆ ಎಂದರು.
ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸಿದ ಮುಖ್ಯಶಿಕ್ಷಕರು, ಸಂಪನ್ಮೂಲ ವ್ಯಕ್ತಿಗಳು ಹಾಗೂ 600ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದನಾ ಪತ್ರ ನೀಡಿದರು.