ಹೂವಿನಹಡಗಲಿಯಲ್ಲಿ ದೈವಜ್ಞ ಬ್ರಾಹ್ಮಣ ಸಮಾಜದಿಂದ ಸೋಮವಾರ ಆಯೋಜಿಸಿದ್ದ ದೈವಜ್ಞ ದರ್ಶನ ಕಾರ್ಯಕ್ರಮವನ್ನು ದೈವಜ್ಞ ಬ್ರಾಹ್ಮಣ ಮಠದ ಜ್ಞಾನೇಶ್ವರಿ ಪೀಠದ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿ ಉದ್ಘಾಟಿಸಿದರು. ಸುಜ್ಞಾನೇಶ್ವರ ಭಾರತಿ ಸ್ವಾಮೀಜಿ, ದೈವಜ್ಞ ಬ್ರಾಹ್ಮಣ ಯುವಕ ಸಂಘದ ತಾಲೂಕು ಅಧ್ಯಕ್ಷ ಮಹಾಬಲೇಶ್ವರ ಡಿ, ಕಾರ್ಯದರ್ಶಿ ರಾಘವೇಂದ್ರ ರಾಯ್ಕರ್ ಇದ್ದರು. 
ಬಳ್ಳಾರಿ

ಒಳ್ಳೇ ಕಾರ್ಯ-ಆಲೋಚನೆ ಅಗತ್ಯ

ಶಾಮಸುಂದರ್ ಕೊಪ್ಪಳಕರ್
ಹೂವಿನಹಡಗಲಿ: ನಮ್ಮ ಯೋಚನೆಗಳೇ ಜೀವನವನ್ನು ಉತ್ತಮಗೊಳಿಸುವುದಕ್ಕೆ ಕಾರಣವಾಗುತ್ತವೆ ಎಂದು ದೈವಜ್ಞ ಬ್ರಾಹ್ಮಣ ಮಠದ ಜ್ಞಾನೇಶ್ವರಿ ಪೀಠದ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿ ಹೇಳಿದರು.
ದೈವಜ್ಞ ಬ್ರಾಹ್ಮಣ ಸಮಾಜದಿಂದ ಆಯೋಜಿಸಿದ್ದ ದೈವಜ್ಞ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಸನಾತನ ಪರಂಪರೆಯ ಸಂಸ್ಕಾರಗಳನ್ನು ಕಲಿಸಬೇಕು. ದೈವಜ್ಞ ಸಮಾಜವು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕಾಗಿದೆ. ನಾವು ಯಾವ ರೀತಿಯ ಆಲೋಚನೆ ಮಾಡುತ್ತೇವೆಯೋ ಅದೇ ರೀತಿಯಲ್ಲಿ ಜೀವನ ಸಾಗುತ್ತದೆ ಎಂದರು.
ಸುಜ್ಞಾನೇಶ್ವರ ಭಾರತಿ ಸ್ವಾಮೀಜಿ ಮಾತನಾಡಿ, ಭಾರತೀಯ ಪರಂಪರೆಗೆ ಭವ್ಯ ಇತಿಹಾಸವಿದೆ. ಮಕ್ಕಳಿಗೆ ಸಂಸ್ಕೃತಿಯ ಅರಿವು ಮೂಡಿಸುವ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು. ದೈವಜ್ಞ ಬ್ರಾಹ್ಮಣ ಯುವಕ ಸಂಘದ ತಾಲೂಕು ಅಧ್ಯಕ್ಷ ಮಹಾಬಲೇಶ್ವರ ಡಿ ಮಾತನಾಡಿದರು. ಇದಕ್ಕೂ ಮೊದಲು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯಗಳೊಂದಿಗೆ ಸ್ವಾಮೀಜಿಗಳ ಮೆರವಣಿಗೆ ನಡೆಯಿತು.
ಕಾರ್ಯದರ್ಶಿ ರಾಘವೇಂದ್ರ ರಾಯ್ಕರ್, ಖಜಾಂಚಿ ನಾಗರಾಜ, ಸದಸ್ಯರಾದ ಪ್ರಕಾಶ, ಸುರೇಶ, ದತ್ತಾತ್ರೇಯ, ಮಂಜುನಾಥ ಸೇರಿದಂತೆ ಇತರರು ಉಪಸ್ಥಿತರಿದ್ದರು.