ಪ್ರಚಾರ ಸಮಿತಿ ಉಸ್ತುವಾರಿಯಾಗಿ ಹೆಗಡೆ ನೇಮಕ 
ಬಳ್ಳಾರಿ

ಪ್ರಚಾರ ಸಮಿತಿ ಉಸ್ತುವಾರಿಯಾಗಿ ಹೆಗಡೆ ನೇಮಕ

ಪ್ರಮುಖ ಮುಖ್ಯಾಂಶಗಳು

  • ಜವಾಬ್ದಾರಿಯನ್ನು ಚಾಚೂ ತಪ್ಪದೇ ಪಾಲಿಸಿ
  • ಪ್ರಾಮಾಣಿಕ ಪ್ರಯತ್ನ
ಬಳ್ಳಾರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಕೊಪ್ಪಳ ಜಿಲ್ಲಾ ಉಸ್ತುವಾರಿಯನ್ನಾಗಿ ನಗರದ ಮುಖಂಡ ವೆಂಕಟೇಶ್ ಹೆಗಡೆ ಅವರನ್ನು ಪ್ರಚಾರ ಸಮಿತಿಯ ನೇಮಿಸಿ ಸಮಿತಿಯ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಆದೇಶಿಸಿದ್ದಾರೆ.
ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿರುವ ವೆಂಕಟೇಶ್ ಹೆಗಡೆ ಅವರನ್ನು ಈ ಮೊದಲು ರಾಯಚೂರು ಜಿಲ್ಲಾ ಉಸ್ತುವಾರಿಯನ್ನಾಗಿ ನಿಯೋಜಿಸಲಾಗಿದ್ದು, ಇದೀಗ ಕೊಪ್ಪಳ ಜಿಲ್ಲಾ ಉಸ್ತುವಾರಿಯನ್ನಾಗಿ ನಿಯೋಜಿಸಲಾಗಿದೆ. ಪಕ್ಷ ನೀಡಿರುವ ಜವಾಬ್ದಾರಿಯನ್ನು ಚಾಚೂ ತಪ್ಪದೇ ಪಾಲಿಸಿ, ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ವೆಂಕಟೇಶ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.