ಬಳ್ಳಾರಿಯ ಡಿಎಆರ್ ಮೈದಾನದಲ್ಲಿ ನಡೆದ ಪರೇಡ್‌ನಲ್ಲಿ ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್ ರೌಡಿಶೀಟರ್‌ಗಳಿಗೆ ವಾರ್ನಿಂಗ್ ನೀಡಿದರು.
- ಮೂಲಾಜಿಲ್ಲದೆ ಕಾನೂನು ಕ್ರಮ
- ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ
ಬಳ್ಳಾರಿ : ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕದಡುವ ರೀತಿಯ ಚಟುವಟಿಕೆಗಳಲ್ಲಿ ತೊಡಗಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್ ಎಚ್ಚರಿಸಿದರು. ನಗರದ ಡಿಎಆರ್ ಮೈದಾನದಲ್ಲಿ ಶುಕ್ರವಾರ ನಡೆದ ರೌಡಿಶೀಟರ್‌ಗಳ ಪರೇಡ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು, ಸಾರ್ವಜನಿಕರಲ್ಲಿ ಭಯ ಹುಟ್ಟಿಸುವುದು, ಗಲಾಟೆ, ದಬ್ಬಾಳಿಕೆ ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದರೆ ಯಾವುದೇ ಮೂಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಮಾಜಘಾತುಕ ಚಟುವಟಿಕೆಗಳಿಂದ ದೂರವಿದ್ದು ಸಾಮಾನ್ಯ ಜೀವನ ನಡೆಸಬೇಕು. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಪೊಲೀಸ್ ಇಲಾಖೆ ಸುಮ್ಮನೆ ಬಿಡುವುದಿಲ್ಲ ಎಂದು ಖಡಕ್ ವಾರ್ನಿಂಗ್ ನೀಡಿದರು. ಜಿಲ್ಲೆಯ ನಾನಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್‌ಗಳು ಪರೇಡ್‌ನಲ್ಲಿ ಭಾಗವಹಿಸಿದ್ದರು.