ಮಹಮ್ಮದ್ ಎನ್.ಜುಬೇರ್ 
ಬಳ್ಳಾರಿ

ಡಿಜಿಟಿಲ್ ವ್ಯವಸ್ಥೆ ಅಳವಡಿಸಿ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಎಡಿಸಿ ಮಹಮ್ಮದ್ ಎನ್.ಜುಬೇರ್ ಹೇಳಿಕೆ
ಬಳ್ಳಾರಿ : ಕಳ್ಳತನ ಹಾಗೂ ಇತರೆ ಅಕ್ರಮ ತಡೆಯಲು ಭಕ್ತರಿಗೆ ಡಿಜಿಟಲ್ ರೂಪದಲ್ಲಿ ಕಾಣಿಕೆ ಸ್ವೀಕರಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಎಡಿಸಿ ಮಹಮ್ಮದ್ ಎನ್.ಜುಬೇರ್ ಹೇಳಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ದೇವಸ್ಥಾನಗಳ ಹುಂಡಿ ಭದ್ರತೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು. ಎಲ್ಲ ದೇವಾಲಯಗಳ ಭಕ್ತರ ಕಾಣಿಕೆ ಹುಂಡಿಗಳಿಗೆ ಸೂಕ್ತ ಭದ್ರತೆ ಒದಗಿಸಿ, 360 ಡಿಗ್ರಿ ಸಿಸಿಟಿವಿ ನಿಗಾ ವ್ಯವಸ್ಥೆ ಅಳವಡಿಸಬೇಕು. ಜತೆಗೆ ಹುಂಡಿ ಎಣಿಕೆ ಕಾರ್ಯವು ಸಂಪೂರ್ಣ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಬೇಕು ಎಂದರು.
ಜಿಲ್ಲೆಯ 713 ದೇವಾಲಯಗಳಲ್ಲಿ ಈಗಾಗಲೇ 354 ದೇವಾಲಯಗಳ ಮಾನಿಟರಿಂಗ್ ಪೂರ್ಣಗೊಂಡಿದ್ದು, ಉಳಿದ ದೇವಾಲಯಗಳಲ್ಲೂ ಶೀಘ್ರವೇ ನಿಗಾ ವ್ಯವಸ್ಥೆ ಅಳವಡಿಸಬೇಕು. ಜಿಲ್ಲೆಯ ಪ್ರಸಿದ್ಧ ಕನಕದುರ್ಗಮ್ಮ ದೇವಸ್ಥಾನದಲ್ಲಿ ಸಿಸಿಟಿವಿ ಮಾನಿಟರಿಂಗ್ ಕಾಮಗಾರಿ ಏಳು ದಿನಗಳೊಳಗೆ ಪೂರ್ಣಗೊಳಿಸಬೇಕು. ದೇವಾಲಯಗಳ ಸೂಕ್ತ ಸ್ಥಳಗಳಲ್ಲಿ ಎಲ್ಲರಿಗೂ ಗೋಚರಿಸುವ ರೀತಿಯಲ್ಲಿ ಹುಂಡಿಗಳನ್ನು ಅಳವಡಿಸಿ ಭದ್ರತೆ ಹೆಚ್ಚಿಸಬೇಕು. ಜಿಲ್ಲೆಯಲ್ಲಿ 5 ಎ , 5 ಬಿ ಹಾಗೂ 703 ಸಿ ವರ್ಗ ಸೇರಿ ಒಟ್ಟು 713 ದೇವಾಲಯಗಳಿದ್ದು, ಎಲ್ಲೆಡೆ ಭದ್ರತಾ ವ್ಯವಸ್ಥೆ ಬಲಪಡಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸಭೆಯಲ್ಲಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯದಲ್ಲಿ ಸರ್ಕಾರಿ ನೌಕರರಿಗೆ ಮಾತ್ರ ಅವಕಾಶ ನೀಡಬೇಕು, ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ರಚಿಸಬೇಕು ಹಾಗೂ ಪ್ರತಿ 15 ದಿನಗಳಿಗೊಮ್ಮೆ ಸಂಬಂಧಿತ ಅಧಿಕಾರಿಗಳು ದೇವಾಲಯಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚಿಸಲಾಯಿತು. ಹುಂಡಿ ಎಣಿಕೆ ವೇಳೆ ಕಳ್ಳತನದಂತಹ ಪ್ರಕರಣಗಳು ಕಂಡುಬಂದರೆ ಸಂಬಂಧಿತ ದೇವಾಲಯ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಚ್ಚರಿಸಿದರು.
==