ಸಂಡೂರು ತಾಲೂಕು ವಿಠಲಾಪುರ ಗ್ರಾಪಂ ಕಾರ್ಯಾಲಯದಲ್ಲಿ ಕಾಯಕ ಗ್ರಾಮ ಕಾರ್ಯಕ್ರಮದಲ್ಲಿ ತಾಪಂ ಇಒ ಮಡಗಿನ ಬಸಪ್ಪ ಮಾತನಾಡಿದರು. ಜಿಪಂ ಮುಖ್ಯ ಲೆಕ್ಕಾಧಿಕಾರಿ ವಿನೋದ್ ಕುಮಾರ್, ಗ್ರಾಪಂ ಅಧ್ಯಕ್ಷ ರಮೇಶ್ ಇತರರಿದ್ದರು. 
ಬಳ್ಳಾರಿ

ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಿ

ಗಾಯತ್ರಿ ಮಾಲಿಪಾಟೀಲ್

ಪ್ರಮುಖ ಮುಖ್ಯಾಂಶಗಳು

  • ಸಮರ್ಪಕ
  • ಅನುಷ್ಠಾನ

ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಿ

ಸಂಡೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಅನುಷ್ಠಾನ ಮಾಡುವ ಮುಂಚೆ ಯೋಜನೆಯ ಪೂರ್ವ ತಯಾರಿ ನಡೆಸಿ ಕಾಮಗಾರಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಪಂ ಮುಖ್ಯ ಲೆಕ್ಕಾಧಿಕಾರಿ ವಿನೋದ್ ಕುಮಾರ್ ಸೂಚಿಸಿದರು.
ವಿಠಲಾಪುರ ಗ್ರಾಪಂ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾಯಕ ಗ್ರಾಮ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಾವುದೇ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕಾದರೆ ಗ್ರಾಮಸ್ಥರ ಸಹಭಾಗಿತ್ವ ಮಹತ್ವದ ಪಾತ್ರವಹಿಸುತ್ತದೆ. ಗ್ರಾಪಂಗಳಲ್ಲಿ ಕಾಲ ಕಾಲಕ್ಕೆ ವಾರ್ಡ್ ಸಭೆಗಳು, ಗ್ರಾಮ ಸಭೆಗಳು, ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆಗಳು ನಡೆಯಬೇಕು ಎಂದರು.
ತಾಪಂ ಒಇ ಮಡಗಿನ ಬಸಪ್ಪ ಮಾತನಾಡಿ, ಕಾಮಗಾರಿ ಅನುಷ್ಠಾನದ ಮೇಲುಸ್ತುವಾರಿಯನ್ನು ಜನ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ವಹಿಸಿಕೊಂಡು ಸಹಕರಿಸಬೇಕು. ಇದರಿಂದ ಗ್ರಾಮಗಳ ಅಭಿವೃದ್ಧಿ ಹಾಗೂ ಗಾಂಧಿ ಕನಸು ನನಸಾಗಲು ಸಾಧ್ಯ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಎಡಿ ವೆಂಕಟೇಶ, ಸಿಡಿಪಿಒ ಪಿ.ನಾಗರಾಜ್, ಸಹಾಯಕ ನಿರ್ದೇಶಕರಾದ ಬಿ.ಎಂ.ರೇಣುಕಾಚಾರ್ಯ, ಮಹೇಶ್ ಕುಮಾರ್, ಗ್ರಾಪಂ ಅಧ್ಯಕ್ಷ ರಮೇಶ್, ಸದಸ್ಯ ಮಹಾಂತೇಶ, ಪಿಡಿಒ ಗಂಗಾಧರ ಕೊಣ್ಣೂರ ಇದ್ದರು.