ಪ್ರಮುಖ ಮುಖ್ಯಾಂಶಗಳು
ಬಳ್ಳಾರಿ :
ಗ್ರಾಪಂ ನೌಕರರಿಗೆ ಕಳೆದ 2022ರ ಮೇ ತಿಂಗಳಲ್ಲಿ ಸರ್ಕಾರ ಹೊರಡಿಸಿರುವ ವೇತನ ಪರಿಷ್ಕ್ರರಣೆ ಆದೇಶದಂತೆ ವೇತನ ಜಾರಿಗೆ ಆಗ್ರಹಿಸಿ, ಇಲ್ಲಿನ ಜಿಪಂ ಸಭಾಂಗಣದಲ್ಲಿ ರಾಜ್ಯ ಗ್ರಾಪಂ ನೌಕರರ ಸಂಘದಿಂದ ಪ್ರತಿಭಟನೆ ನಡೆಯಿತು.
ಗ್ರಾಮೀಣ ಪ್ರದೇಶಗಳಲ್ಲಿ ಸಂಜೀವಿನಿ ಒಕ್ಕೂಟದ ಮೂಲಕ ಪಂಚಾಯಿತಿಗಳ ತರಬೇತಿಯೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಸ್ವಚ್ಛವಾಹಿನಿ ಮಹಿಳಾ ವಾಹನ ಚಾಲಕಿಯರು ಹಾಗೂ ಕಸಗುಡಿಸುವ ಮಹಿಳೆಯರಿಗೆ ಕೆಲವೆಡೆ 12 ವರ್ಷಗಳಿಂದ ವೇತನ ಪಾವತಿಯಾಗಿಲ್ಲ. ಸಂಜೀವಿನಿ ಒಕ್ಕೂಟದಿಂದ ಬೇರ್ಪಡಿಸಿ ಗ್ರಾಪಂ ಮೂಲಕವೇ ವೇತನ ಪಾವತಿಸುವ ವ್ಯವಸ್ಥೆ ಕಲ್ಪಿಸಬೇಕು. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಮುಂದುವರಿಸಬೇಕು. ಕಂಪ್ಯೂಟರ್ ಹಾಗೂ ಅಗತ್ಯ ವಿದ್ಯಾರ್ಹತೆ ಹೊಂದಿರುವ ಪಂಚಾಯಿತಿ ನೌಕರರಿಗೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.