ಗಣಪತಿ ಹೆಗಡೆ 
ಬಳ್ಳಾರಿ

ಸಂಘದ ಕಚೇರಿ ಉದ್ಘಾಟನೆ

ಪ್ರಮುಖ ಮುಖ್ಯಾಂಶಗಳು

  • ನೌಕರರ
ಬಳ್ಳಾರಿ : ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ನೌಕರರ ಕಲ್ಯಾಣ ಸಂಘದ ನೂತನ ಕಚೇರಿಯನ್ನು ಇಲ್ಲಿನ ರೇಣುಕಾ ಕಿಚನ್ ಬಳಿಯಲ್ಲಿ ಜ.25ರಂದು ಉದ್ಘಾಟಿಸಲಾಗುವುದು ಎಂದು ಸಂಘದ ಗೌರವಾಧ್ಯಕ್ಷ ಗಣಪತಿ ಹೆಗಡೆ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲಿ ಮಾತನಾಡಿದರು. ಜತೆಗೆ ತುಂಗಭದ್ರಾ ಗ್ರಾಮೀಣ ಬ್ಯಾಂಕ್ ಸ್ಥಾಪನೆಯಾಗಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಸುವರ್ಣ ಮಹೋತ್ಸವ’ ಹಾಗೂ ಸಂಘದ ವಿಶೇಷ ಮಹಾಸಭೆಯನ್ನು ನಗರದ ಕಮ್ಮ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದಲ್ಲಿ ಗ್ರಾಮೀಣ ಬ್ಯಾಂಕಿಂಗ್ ಕ್ಷೇತ್ರದ ಸಾಧನೆ ಹಾಗೂ ಖಾಸಗೀಕರಣದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.
ಗ್ರಾಮೀಣ ಜನರ ಏಳಿಗೆಗೆ 1975ರಲ್ಲಿ ಆರಂಭವಾದ ಈ ಬ್ಯಾಂಕ್‌ಗಳು ಇಂದು ವಿನಾಶದ ಅಂಚಿಗೆ ತಳ್ಳಲ್ಪಡುತ್ತಿವೆ. ಕೇಂದ್ರ ಸರ್ಕಾರವು 2015ರ ಗ್ರಾಮೀಣ ಬ್ಯಾಂಕ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಶೇ. 49ರಷ್ಟು ಷೇರುಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಮುಂದಾಗಿರುವುದು ಸರಿಯಲ್ಲ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ರಿಯಾಯಿತಿ ದರದಲ್ಲಿ ಸಾಲ ನೀಡುವ ಗ್ರಾಮೀಣ ಬ್ಯಾಂಕ್‌ಗಳ ಮೂಲ ಉದ್ದೇಶಕ್ಕೆ ಕೊಡಲಿ ಪೆಟ್ಟು ಬೀಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸಂಘದ ಅಧ್ಯಕ್ಷ ಸಿ.ವೆಂಕಟರಾಮಪ್ಪ, ಪದಾಧಿಕಾರಿಗಳಾದ ಎಸ್.ಟಿ.ವೇಣುಗೋಪಾಲ ಶೆಟ್ಟಿ, ಎಸ್.ಎಂ.ಮಹಾಂತಯ್ಯ ಇದ್ದರು.