ಬಳ್ಳಾರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕ್ರಾಂತಿ ಜ್ಯೋತಿ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಈಶ್ವರ ಬಿ.ಖಂಡ್ರೆ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್, ಮೇಯರ್ ಪಿ.ಗಾದೆಪ್ಪ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ, ಬುಡಾ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಮುಖಂಡರಾದ ಬೋಯಪಾಟಿ ವಿಷ್ಣು, ಮಹಮ್ಮದ್ ರಫೀಕ್, ಹುಮಾಯಾನ ಖಾನ್ ಇತರರಿದ್ದರು. 
ಬಳ್ಳಾರಿ

ಚಳುವಳಿ ಇತಿಹಾಸಲ್ಲಿ ಚಿರಸ್ಥಾಯಿಯಾಗಿದೆ

ಪ್ರಮುಖ ಮುಖ್ಯಾಂಶಗಳು

  • ಮಾಡು ಇಲ್ಲವೇ ಮಡಿ

ಬಳ್ಳಾರಿ :

ಭಾರತದ ಸ್ವಾತಂತ್ರೃ ಹೋರಾಟದಲ್ಲಿ ‘ಭಾರತ ಬಿಟ್ಟು ತೊಲಗಿ ’ (ಕ್ವಿಟ್ ಇಂಡಿಯಾ)ಚಳುವಳಿಯು ಕೇವಲ ಚರಿತ್ರೆಯಲ್ಲಷ್ಟೇ ಅಲ್ಲದೆ, ಇಡೀ ಜಗತ್ತಿನ ಇತಿಹಾಸದಲ್ಲೇ ಚಿರಸ್ಥಾಯಿಯಾಗಿ ಉಳಿದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಕ್ರಾಂತಿ ಜ್ಯೋತಿ (ಕ್ವಿಟ್ ಇಂಡಿಯಾ ಮೂಮೆಂಟ್) ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ನೀಡಿದ ’ಮಾಡು ಇಲ್ಲವೇ ಮಡಿ’ ಎಂಬ ಕರೆ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ದೇಶಪ್ರೇಮದ ಅಗ್ನಿಯನ್ನು ಹಚ್ಚಿದ ಪ್ರೇರಣೆಯ ಜ್ಯೋತಿಯಾಗಿತ್ತು. ಬ್ರಿಟಿಷ್ ಆಡಳಿತದ ವಿರುದ್ಧ ನಡೆದ ಅಂತಿಮ ಹೋರಾಟದಲ್ಲಿ ಸರ್ವಸ್ವವನ್ನೂ ತ್ಯಾಗ ಮಾಡಿದ ಮಹನೀಯರ ಸ್ಮರಣೆ ಪ್ರತಿಯೊಬ್ಬರ ಕರ್ತವ್ಯ ಎಂದರು.

===