ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಲಾ ವೈಭವ ಕಾರ್ಯಕ್ರಮವನ್ನು ಮೇಯರ್ ಪಿ.ಗಾದೆಪ್ಪ ಉದ್ಘಾಟಿಸಿದರು. ಮಕ್ಕಳ ಸಾಹಿತಿ ಶಿವಲಿಂಗಪ್ಪ ಹಂದಿಹಾಳು, ಲೇಖಕರಾದ ಕುಬೇರಪ್ಪ, ಸಿದ್ದರಾಮ ಕಲ್ಮಠ, ಆಲಾಪ್ ಸಂಗೀತ ಟ್ರಸ್ಟ್ ಅಧ್ಯಕ್ಷ ರಮಣಪ್ಪ ಭಜಂತ್ರಿ ಇತರರಿದ್ದರು. 
ಬಳ್ಳಾರಿ

ಸಾಂಸ್ಕೃತಿಕ ಕಲೆಗಳಿಗೆ ನಿರಸ ಪ್ರತಿಕ್ರಿಯೆ

ಪ್ರಮುಖ ಮುಖ್ಯಾಂಶಗಳು

  • ಪಾಲಕರು ಮಕ್ಕಳಿಗೆ ಅರಿವು ಮೂಡಿಸಬೇಕು
  • ಕಲೆಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿ
ಬಳ್ಳಾರಿ : ಇತ್ತೀಚಿಗೆ ಟಿವಿ ಮತ್ತು ಮೊಬೈಲ್‌ಗಳ ಹಾವಳಿಯಿಂದ ಕಲೆ, ಸಾಹಿತ್ಯ, ಸಂಸ್ಕೃತಿಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಮೇಯರ್ ಪಿ.ಗಾದೆಪ್ಪ ಬೇಸರ ವ್ಯಕ್ತಪಡಿಸಿದರು.
ನಗರದ ರಾಘವ ಕಲಾಮಂದಿರದಲ್ಲಿ ಆಲಾಪ್ ಸಂಗೀತ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಶೇಷ ಘಟಕ ಯೋಜನೆಯಡಿಯಲ್ಲಿ ಸುಗಮ ಸಂಗೀತ, ಜಾನಪದ ಸಮೂಹ ನೃತ್ಯ, ತೊಗಲುಗೊಂಬೆ, ಬಯಲಾಟಗಳ ಪ್ರದರ್ಶನದ ಸಾಂಸ್ಕೃತಿಕ ಕಲಾ ವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಸ್ಕೃತಿಯ ಬಗ್ಗೆ ಪಸರಿಸುವ ಇಂತಹ ಕಾರ್ಯಕ್ರಮಗಳ ಬಗ್ಗೆ ಪಾಲಕರು ಮಕ್ಕಳಿಗೆ ಅರಿವು ಮೂಡಿಸಬೇಕು. ಮುಂದಿನ ದಿನಗಳಲ್ಲಿ ಕಲೆಗೆ ಹೆಚ್ಚಿನ ಪ್ರೋತ್ಸಾಹ ದೊರೆಯಲಿದೆ ಎಂದರು. ಆಲಾಪ್ ಸಂಗೀತ ಟ್ರಸ್ಟ್ ಅಧ್ಯಕ್ಷ ರಮಣಪ್ಪ ಭಜಂತ್ರಿ ಮಾತನಾಡಿ, ಸಂಸ್ಥೆಯು ಕಳೆದ ಹತ್ತು ವರ್ಷಗಳಿಂದ ಜಿಲ್ಲೆಯಲ್ಲದೆ ರಾಜ್ಯದ ನಾನಾ ಕಡೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದೆ. ಇಂತಹ ಕಾರ್ಯಕ್ರಮಗಳಿಂದ ಹೊಸ ಪ್ರತಿಭೆಗಳನ್ನು ಗುರುತಿಸುವ ಕೆಲಸ ಮಾಡುತ್ತಿದೆ ಎಂದರು.