ಹಗರಿಬೊಮ್ಮನಹಳ್ಳಿಯ ಗಂಗಾವತಿ ಭೀಮಪ್ಪನವರ ಸರ್ಕಾರಿ ಪ.ಪೂ.ಕಾಲೇಜಿನ ತಾಲೂಕು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಶಾಸಕ ಕೆ.ನೇಮಿರಾಜ್‌ನಾಯ್ಕ, ತಹಸೀಲ್ದಾರ್ ಆರ್.ಕವಿತಾ, ಪುರಸಭೆ ಅಧ್ಯಕ್ಷೆ ರೇಷ್ಮಾ ಸಿಕಂದರ್, ಉಪಾಧ್ಯಕ್ಷೆ ನೇತ್ರಾವತಿ ಹುಚ್ಚಪ್ಪ, ಮುಖ್ಯಾಧಿಕಾರಿ ಎಂ.ಕೆ.ಮುಗಳಿ ಇತರರಿದ್ದರು. 
ಬಳ್ಳಾರಿ

ನೀರಾವರಿ ಯೋಜನೆಗಳು ಜಾರಿಯಾಗಲಿ

ಗಾಯತ್ರಿ ಮಾಲಿಪಾಟೀಲ್

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ನೇಮಿರಾಜ್ ನಾಯ್ಕ ಹೇಳಿಕೆ
  • 80ನೇ ಸ್ವಾತಂತ್ರ್ಯೋತ್ಸವ

ಹಗರಿಬೊಮ್ಮನಹಳ್ಳಿ: ಬರಗಾಲದಿಂದ ರೈತಾಪಿ ವರ್ಗ ಸಂಕಷ್ಟದಲ್ಲಿದೆ. ರಾಜ್ಯಕ್ಕೆ ಗ್ಯಾರಂಟಿ ಯೋಜನೆಗಳ ಬದಲಿಗೆ ನೀರಾವರಿ ಯೋಜನೆಗಳು ಸಮರ್ಪಕ ಜಾರಿಯಾದರೆ ಬಡವರ ಬದುಕು ಹಸನಾಗುತ್ತದೆ ಎಂದು ಶಾಸಕ ಕೆ.ನೇಮಿರಾಜ್ ನಾಯ್ಕ ಹೇಳಿದರು.

ಗಂಗಾವತಿ ಭೀಮಪ್ಪನವರ ಸರ್ಕಾರಿ ಪಿ.ಯು.ಕಾಲೇಜ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಶನಿವಾರ ಸ್ವಾತಂತ್ರೊೃೀತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. 1 ವರ್ಷದ ಒಳಗೆ ಕ್ಷೇತ್ರದ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡಿ ದುರಸ್ತಿ ಕೈಗೊಳ್ಳಲಾಗುವುದು ಎಂದರು. ವಿವಿಧ ಕ್ಷೇತ್ರದ ಸಾಧಕರನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ತಹಸೀಲ್ದಾರ್ ಆರ್.ಕವಿತಾ, ಪುರಸಭೆ ಅಧ್ಯಕ್ಷೆ ರೇಷ್ಮಾ ಸಿಕಂದರ್, ಉಪಾಧ್ಯಕ್ಷೆ ನೇತ್ರಾವತಿ ಹುಚ್ಚಪ್ಪ, ಮುಖ್ಯಾಧಿಕಾರಿ ಎಂ.ಕೆ.ಮುಗಳಿ, ಸದಸ್ಯರಾದ ಪವಾಡಿ ಹನುಮಂತಪ್ಪ ದೀಪಕ್ ಕಠಾರೆ, ಗಂಗಾಧರ್, ಬಣಕಾರ್ ಸುರೇಶ್ ಕುಮಾರ್, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಗುರುಬಸವರಾಜ್ ಸೊನ್ನದ್, ತಾಪಂ ಇಒ ಪಿ.ವಿಶ್ವಾನಾಥ, ಸಿಪಿಐ ವಿಕಾಸ್ ಲಂಬಾಣಿ, ಟಿಎಚ್‌ಒ ಪ್ರವೀಣ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಗದೀಶ್, ಬಿಆರ್‌ಸಿ ಸಮನ್ವಯಾಧಿಕಾರಿ ಪ್ರಭಾಕರ್ ಇತರರಿದ್ದರು.