ಹಗರಿಬೊಮ್ಮನಹಳ್ಳಿ ತಾಲೂಕು ಆಡಳಿತ ಸೌಧದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು. ಶಾಸಕ ಕೆ.ನೇಮಿರಾಜ ನಾಯ್ಕ, ಉಪ ತಹಸೀಲ್ದಾರ್ ಶಿವಕುಮಾರಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಒಕ್ಕಲಿಗ ಸಮುದಾಯದ ಜಿಲ್ಲಾಧ್ಯಕ್ಷ ಸಾಗರಗೌಡ, ಗೌರವಾಧ್ಯಕ್ಷ ಕೆ.ನಾಗರಾಜ ಗೌಡ ಇದ್ದರು.
- ಶಾಸಕ ಕೆ.ನೇಮಿರಾಜ ನಾಯ್ಕ ಹೇಳಿಕೆ
- ನಾಡಪ್ರಭು ಕೆಂಪೇಗೌಡ ಜಯಂತಿ
ಹಗರಿಬೊಮ್ಮನಹಳ್ಳಿ: ನಾಡಪ್ರಭು ಕೆಂಪೇಗೌಡರು ಆಡಳಿತಾತ್ಮಕ ದೂರದೃಷ್ಠಿ ಹೊಂದಿದ್ದರು ಎಂದು ಶಾಸಕ ಕೆ.ನೇಮಿರಾಜ ನಾಯ್ಕ ಹೇಳಿದರು.
ತಾಲೂಕು ಆಡಳಿತ ಸೌಧದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೆಂಪೇಗೌಡರು ನಾಡಿದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಅವರ ತತ್ವಾದರ್ಶಗಳನ್ನು ಇಂದಿನ ರಾಜಕಾರಣಿಗಳು ಅಳವಡಿಸಿಕೊಳ್ಳಬೇಕು ಎಂದರು.
ಉಪ ತಹಸೀಲ್ದಾರ್ ಶಿವಕುಮಾರಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಯುವ ಘಟಕದ ತಾಲೂಕು ಮಾಜಿ ಅಧ್ಯಕ್ಷ ಟಿ.ಕೊಟ್ರೇಶ, ಉಲವತ್ತಿ ಪ್ರಾಕೃಪಸ ಸಂಘದ ಅಧ್ಯಕ್ಷ ಕನ್ನಿಹಳ್ಳಿ ಚಂದ್ರಶೇಖರ, ಒಕ್ಕಲಿಗ ಸಮುದಾಯದ ಜಿಲ್ಲಾಧ್ಯಕ್ಷ ಸಾಗರಗೌಡ, ಗೌರವಾಧ್ಯಕ್ಷ ಕೆ.ನಾಗರಾಜ ಗೌಡ, ಕಾರ್ಯದರ್ಶಿ ಕೆ.ಬಿ.ಸಿದ್ದೇಶ, ಪ್ರಮುಖರಾದ ಕೆ.ಬಿ.ಕೊಟ್ರೇಶ, ಕೆ.ರಾಮಪ್ಪ, ಕೆ.ಗಂಗಾಧರ, ಕೆ.ಸಿದ್ದಲಿಂಗಪ್ಪ, ಕೆ.ಶಶಿಕುಮಾರ್ ಇತರರಿದ್ದರು.