ಹೂವಿನಹಡಗಲಿ ತಹಸಿಲ್ ಕಚೇರಿ ಮುಂದೆ ರೈತಸಂಘ ಹಾಗೂ ಹಸಿರು ಸೇನೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ತಾಲೂಕು ಅಧ್ಯಕ್ಷೆ ಕಲಾವತಿ, ಸದಸ್ಯರಾದ ದ್ಯಾಮಪ್ಪ, ಪ್ರಮೋದ, ರಾಜಪ್ಪ, ಮಹೇಶ್, ಮುತ್ತಪ್ಪ, ಪದ್ಮಾವತಿ ಇತರರಿದ್ದರು. 
ಬಳ್ಳಾರಿ

ರಸಗೊಬ್ಬರ ಬೆಲೆ ಇಳಿಕೆ ಮಾಡಲಿ

ಪ್ರಮುಖ ಮುಖ್ಯಾಂಶಗಳು

  • ರೈತಸಂಘ-ಹಸಿರುಸೇನೆ ಒತ್ತಾಯ
  • ಪ್ರತಿಭಟನೆ
ಹೂವಿನಹಡಗಲಿ: ಯೂರಿಯಾ ಹಾಗೂ ಇತರ ರಸಗೊಬ್ಬರಗಳ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿ ತಹಸಿಲ್ ಕಚೇರಿ ಮುಂದೆ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ತಾಲೂಕು ಅಧ್ಯಕ್ಷೆ ಕಲಾವತಿ ಮಾತನಾಡಿ, ಈ ಬಾರಿ ಮುಂಗಾರು ಕೈಕೊಟ್ಟ ಕಾರಣ ರೈತರು ಕಂಗಾಲಾಗಿದ್ದಾರೆ. ಇನ್ನು ಜಮೀನುಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕಗಳನ್ನು ಅಳವಡಿಸಲಾಗುತ್ತಿದೆ. ಅಲ್ಲದೆ ರಾಜ್ಯದಲ್ಲಿ ವಿದ್ಯುತ್ ವಲಯ ಖಾಸಗೀಕರಣ ಮಾಡಲಾಗುತ್ತಿದೆ. ಸರ್ಕಾರ ಎಲ್ಲ ಕಡೆಯಿಂದಲೂ ರೈತರನ್ನು ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡುತ್ತಿದೆ.
ಕೂಡಲೇ ಸರ್ಕಾರ ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಹಾಗೂ ರಸಗೊಬ್ಬರ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು. ಸದಸ್ಯರಾದ ದ್ಯಾಮಪ್ಪ, ಪ್ರಮೋದ, ರಾಜಪ್ಪ, ಮಹೇಶ್, ಮುತ್ತಪ್ಪ, ಪದ್ಮಾವತಿ, ಅಂಜಿನಪ್ಪ ಇತರರಿದ್ದರು.