ಬಳ್ಳಾರಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಉದ್ಘಾಟಿಸಿದರು. ಸಂಸ್ಥೆಯ ನಿರ್ದೇಶಕ ರಾಜೇಸಾಬ್ ಎಚ್ ಎರಿಮನಿ, ಕೆಎಸ್‌ಐಡಿಸಿ ಎಜಿಎಂ ಮಲ್ಲಿಕಾರ್ಜುನ, ಉಪನ್ಯಾಸಕರಾದ ಜಡೇಶ, ದಿನೇಶಕುಮಾರ, ಸಿದ್ದಲಿಂಗಮ್ಮ, ಸಂತೋಷ ಕುಮಾರ, ಪರಮೇಶ ಇತರರಿದ್ದರು. == 
ಬಳ್ಳಾರಿ

ಯುವಕರು ಆರ್ಥಿಕವಾಗಿ ಬೆಳೆಯರಿ

ಪ್ರಮುಖ ಮುಖ್ಯಾಂಶಗಳು

  • ಉದ್ಯೋಗ
ಬಳ್ಳಾರಿ : ತಾಳ್ಮೆ, ಆತ್ಮವಿಶ್ವಾಸ, ಧೈರ್ಯದಿಂದ ಹೊಸ ಉದ್ಯೋಗಗಳನ್ನು ಪ್ರಾರಂಭಿಸುವ ಮೂಲಕ ಯುವಕರು ಆರ್ಥಿಕವಾಗಿ ಬೆಳೆಯಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಹೇಳಿದರು.
ನಗರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಷ್ಠಿ ಕಾರ್ಯಕ್ರಮದಡಿ ಗುರುವಾರ ಆಯೋಜಿಸಿದ್ದ ಹತ್ತು ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯುವ ಸಮುದಾಯ ಸರ್ಕಾರದ ಯೋಜನೆಗಳನ್ನು ಪಡೆದುಕೊಂಡು ಉದ್ಯಮ ಆರಂಭಿಸುವಂತರಾಗಬೇಕು. ಇತರರಿಗೂ ಉದ್ಯೋಗ ನೀಡಲು ಮುಂದಾಗಬೇಕು ಎಂದರು.
ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕ ಶ್ಯಾಮ್ ಮಾತನಾಡಿ, ಒಂದು ಉದ್ಯಮ ಸ್ಥಾಪಿಸಲು ಸಾಲ ಪಡೆದುಕೊಂಡು ಸರಿಯಾಗಿ ಮರುಪಾವತಿ ಮಾಡಿದರೆ ಇನ್ನೂ ಹೆಚ್ಚಿನ ಸಾಲ ಪಡೆದುಕೊಳ್ಳಲು ಅವಕಾಶವಿರುತ್ತದೆ. ಕಾರ್ಯಕ್ಷೇತ್ರದಲ್ಲಿ ಪರಿಪೂರ್ಣತೆಯಿಂದ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.