ವಿದ್ಯುತ್ ತಗುಲಿ ಲೈನ್‌ಮನ್ ಸಾವು
- ವಿದ್ಯುತ್ ಪ್ರವಹಿಸಿ ಲೈನ್‌ಮನ್ ಮೃತ
ಬಳ್ಳಾರಿ : ವಿದ್ಯುತ್ ಕಂಬದಲ್ಲಿ ವಿದ್ಯುತ್ ದುರಸ್ತಿ ಮಾಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಲೈನ್‌ಮನ್ ಮೃತಪಟ್ಟ ಘಟನೆ ಸಂಡೂರು ತಾಲೂಕಿನ ಕಾಳಿಂಗೇರಿ ಗ್ರಾಮದಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಲೋಕಪ್ಪನ ಹೊಲ ಗ್ರಾಮದ ರಾಮಪ್ಪ ಚಲುವಾದಿ (30)ಮೃತ. ದುರಸ್ತಿ ವೇಳೆ ವ್ಯಕ್ತಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಕಂಬದಿಂದ ಕೆಳಗೆ ಬಿದ್ದಿದ್ದಾರೆ. ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲಿ ಮೃತಪಟ್ಟಿದ್ದಾನೆ. ಈ ಮೃತನ ಪತ್ನಿ ನೀಲಮ್ಮ ಚೂರುನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.