ಶಿವಣ್ಣ 
ಬಳ್ಳಾರಿ

ಮೀನುಗಾರಿಕೆ ಎಡಿ ಮೇಲೆ ಲೋಕಾಯುಕ್ತ ದಾಳಿ

ಪ್ರಮುಖ ಮುಖ್ಯಾಂಶಗಳು

  • ಲೋಕಾಯುಕ್ತ
ಬಳ್ಳಾರಿ : ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಅವರ ಕಚೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದರು.
ಅದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆ ಇಲ್ಲಿನ ಸಿದ್ಧಾರ್ಥ ನಗರದಲ್ಲಿರುವ ಶಿವಣ್ಣ ಅವರ ಮನೆ ಹಾಗೂ ಕಚೇರಿ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಅಧಿಕಾರಿಗಳ ತಂಡ ಶೋಧ ಕಾರ್ಯ ನಡೆಸಿತು. ಸಹಾಯಕ ನಿರ್ದೇಶಕ ಶಿವಣ್ಣ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದವು. ದಾಳಿಯಲ್ಲಿ ಈ ದೂರುಗಳ ಸತ್ಯಾಸತ್ಯತೆ ಪರಿಶೀಲನೆ ಮತ್ತು ದಾಖಲೆಗಳು ಸಂಗ್ರಹಿಸಲಾಗಿದೆ ಎನ್ನಲಾಗಿದೆ.