ಲಾರಿಗಳು ಡಿಕ್ಕಿ ಸಂಚಾರ ಅಸ್ತವ್ಯಸ್ತ 
ಬಳ್ಳಾರಿ

ಲಾರಿಗಳು ಡಿಕ್ಕಿ ಸಂಚಾರ ಅಸ್ತವ್ಯಸ್ತ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ

ಬಳ್ಳಾರಿ :

ತಾಲೂಕಿನ ಬಿಟಿಪಿಎಸ್ ಘಟಕದ ಬಳಿ ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿ ವಾಹನಗಳು ಸಂಚರಿಸಲು ಹರಸಾಹಸ ಪಟ್ಟರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಗಾತ್ರದ ಕಬ್ಬಿಣದ ಪೈಪ್‌ಗಳನ್ನು ಹೊತ್ತು ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಲಾರಿಯು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕ್ಕೆ ಲಾರಿಯಲ್ಲಿದ್ದ ಭಾರಿ ಗಾತ್ರದ ಕಬ್ಬಿಣದ ಪೈಪ್‌ಗಳು ಲಾರಿಯ ಮುಂಭಾಗದ ಕ್ಯಾಬಿನ್‌ಗೆ ತಾಗಿದ್ದು, ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಎರಡು ಲಾರಿಗಳು ಅಪಘಾತಕ್ಕೆ ಒಳಗಾಗಿದ್ದರಿಂದ ಲಾರಿಯಲ್ಲಿದ್ದ ಭಾರಿ ಗಾತ್ರದ ಪೈಪ್‌ಗಳು ಚೆಲ್ಲಾಪಿಲ್ಲಿಯಾಗಿ ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ರಾಷ್ಟ್ರೀಯ ಹೆದ್ದಾರಿಯ ಒಂದು ಬದಿಯ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು.
ಏಕ ಮುಖ ರಸ್ತೆಯಲ್ಲಿ ಬಾರಿ ವಾಹನಗಳು ನಿರಂತರವಾಗಿ ಸಂಚಾರ ಮಾಡಿದ ಪರಿಣಾಮ ಕುಡತಿನಿಯ ಟೋಲ್ ಗೇಟ್ ಬಳಿ ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಟ್ರಾಮ್ ಕೇರ್‌ನಲ್ಲಿ ದಾಖಲಿಸಲಾಗಿದೆ. ಈ ಕುರಿತು ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
==