ಬಳ್ಳಾರಿಯ ಗಡಗಿ ಚನ್ನಪ್ಪ ವೃತ್ತದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಯಿತು. ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್, ಮುಖಂಡರಾದ ಅಂಜಿನಿ, ಶಾರದ, ವೀರೇಶ್, ಹಸೀನ್ ಇತರರಿದ್ದರು 
ಬಳ್ಳಾರಿ

ಎಲ್‌ಪಿಜಿ ಬೆಲೆ ಏರಿಕೆ ಖಂಡನೀಯ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಪ್ರತಿಭಟನೆ
ಬಳ್ಳಾರಿ : ದಿನೇದಿನೆ ಏರಿಕೆಯಾಗುತ್ತಿರುವ ಎಲ್‌ಪಿಜಿ ಗ್ಯಾಸ್ ಬೆಲೆ ಏರಿಕೆ ಖಂಡಿಸಿ, ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಮಾತನಾಡಿ, ಕೇಂದ್ರ ಸರ್ಕಾರವು ಕಾರ್ಪೊರೇಟ್ ಕಂಪನಿಗಳ ಹಿತ ಕಾಯುವಲ್ಲಿ ನಿರತವಾಗಿದ್ದು, ಸಾಮಾನ್ಯ ಜನರ ಸಂಕಷ್ಟ ಮರೆತಿದೆ. ತಕ್ಷಣವೇ ಗ್ಯಾಸ್ ದರವನ್ನು ಇಳಿಕೆ ಮಾಡದಿದ್ದರೆ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲಾಗುವುದಾಗಿ ಎಚ್ಚರಿಕೆ ನೀಡಿದರು. ಬೆಲೆ ಏರಿಕೆಯಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕು ದುಸ್ತರವಾಗಿದೆ. ಗೃಹಿಣಿಯರ ಅಡುಗೆ ಮನೆ ಬಜೆಟ್ ಏರುಪೇರಾಗುತ್ತಿದೆ ಎಂದು ಕಿಡಿಕಾರಿದರು.
ಬಳಿಕ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ಹೊರಹಾಕಿದರು. ಆಟೋ ರಿಕ್ಷಾಗೆ ಎಲ್‌ಪಿಜಿ ಸಿಲಿಂಡರ್ ನೇತುಹಾಕುವ ಮೂಲಕ ಗ್ಯಾಸ್ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಅನುಭವಿಸುತ್ತಿರುವ ಸಂಕಷ್ಟವನ್ನು ವಿಭಿನ್ನವಾಗಿ ಬಿಂಬಿಸಲಾಯಿತು.
====