ಕುರುಗೋಡಿನ ಸೋಮಸಮುದ್ರ ಗ್ರಾಮಕ್ಕೆ ಭೇಟಿ ನೀಡಿದ್ದ ತಾಲೂಕು ಉಸ್ತುವಾರಿ ಕಾರ್ಯದರ್ಶಿ ಚನ್ನಪ್ಪ ನರೇಗಾ ಕೂಲಿ ಕಾರ್ಮಿಕರೊಂದಿಗೆ ಚರ್ಚಿಸಿದರು.
ಕುರುಗೋಡು: ಸೋಮಸಮುದ್ರ ಗ್ರಾಮಕ್ಕೆ ತಾಲೂಕು ಉಸ್ತುವಾರಿ ಕಾರ್ಯದರ್ಶಿ ಚನ್ನಪ್ಪ ಇತ್ತೀಚಿಗೆ ಭೇಟಿ ನೀಡಿ ನರೇಗಾ ಯೋಜನೆಯಡಿ ಕೈಗೊಂಡ ನಾಲಾ ಮತ್ತು ಕಾಲುವೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದರು.
ನರೇಗಾ ಮತ್ತು ವಿಬಿ ಜಿ ರಾಮ್ ಜಿ ನಡುವಿನ ಗೊಂದಲದಿಂದ ಈ ವರ್ಷ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ ಕಾರ್ಮಿಕರಿಗೆ ಸಕಾಲಕ್ಕೆ ಉದ್ಯೋಗ ಕಲ್ಪಿಸಲು ಸಾಧ್ಯವಾಗಿಲ್ಲ. ಮುಂದಿನ ತಿಂಗಳಿಂದ ಒಂದು ಕುಟುಂಬಕ್ಕೆ 100 ದಿನ ಉದ್ಯೋಗ ನೀಡುವುದು ಕಡ್ಡಾಯವಾಗಿದೆ. ಸಾರ್ವಜನಿಕರು ಹಾಗೂ ರೈತರಿಗೆ ಅನುಕೂಲವಾಗುವ ಯೋಜನೆಗಳ ಕ್ರಿಯಾಯೋಜನೆ ರೂಪಿಸಬೇಕು. ಅಂಗವಿಕಲರು ಮತ್ತು ವೃದ್ಧರಿಂದ ಕಡಿಮೆ ಕೆಲಸ ಮಾಡಿಸಿ, ಪೂರ್ಣ ಪ್ರಮಾಣದ ಕೂಲಿ ಹಣ ನೀಡಬೇಕು. ಬಿಸಿಲು ಹೆಚ್ಚಾಗಿರುವುದರಿಂದ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಕುಡಿವ ನೀರು, ನೆರಳು ಸೇರಿದಂತೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.