ಬಳ್ಳಾರಿ: ದೇಶಭಕ್ತಿಯ ಸಂಕೇತವಾಗಿರುವ ವೀರವನಿತೆ ಒನಕೆ ಓಬವ್ವ ಜಯಂತಿ ನ.11ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಶೇಕ್ಷಾವಲಿ ಹೇಳಿದರು.
ಡಿಸಿ ಕಚೇರಿಯಲ್ಲಿ ಬುಧವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಅಂದು ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಒನಕೆ ಓಬವ್ವ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸೀಮಿತರಲ್ಲ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು. ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಒನಕೆ ಓಬವ್ವ ಅವರ ಶೌರ್ಯ, ತ್ಯಾಗ ಮತ್ತು ಸ್ವಾಭಿಮಾನದ ಕುರಿತು ವಿಶೇಷ ಉಪನ್ಯಾಸ ನೀಡಲು ನುರಿತ ಉಪನ್ಯಾಸಕರನ್ನು ನಿಯೋಜಿಸಬೇಕು. ನಂತರ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.
ವೇದಿಕೆ ಕಾರ್ಯಕ್ರಮದಲ್ಲಿ ಸ್ವಚ್ಛತೆ, ಕುಡಿವ ನೀರು ಸೇರಿ ಅಗತ್ಯ ವ್ಯವಸ್ಥೆ ಕೈಗೊಳ್ಳಬೇಕು. ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸುವಂತೆ ಡಿಡಿಪಿಯು ಕ್ರಮವಹಿಸಬೇಕು ಎಂದು ತಿಳಿಸಿದರು.