ಮಂಜುನಾಥ ಗೋವಿಂದವಾಡ 
ಬಳ್ಳಾರಿ

ಮಂಜುನಾಥ ಗೋವಿಂದವಾಡ ನಿಧನ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತ
ಬಳ್ಳಾರಿ :ಇಲ್ಲಿನ ಅಚ್ಯುತ ನಗರದ ನಿವಾಸಿ ಚಿತ್ರಕಲಾವಿದ, ಕರ್ನಾಟಕ ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮಂಜುನಾಥ ಗೋವಿಂದವಾಡ (52) ಹೃದಯಾಘಾತದಿಂದ ಸೋಮವಾರ ನಿಧನರಾದರು. ಇವರಿಗೆ ಪತ್ನಿ, ಓರ್ವ ಪುತ್ರ, ಪುತ್ರಿಯಿದ್ದಾರೆ. ನಗರದ ವೀರಶೈವ ರುದ್ರಭೂಮಿಯಲ್ಲಿ ಸೋಮವಾರ ಅಂತ್ಯಕ್ರಿಯೆ ನೆರವೇರಿಸಲಾಯಿತು.