ಹರಪನಹಳ್ಳಿ ತಾಲೂಕು ಕ್ರೀಡಾಂಗಣದಲ್ಲಿ ಸ್ವಾತಂತ್ರೊೃೀತ್ಸವ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸಾಧಕರನ್ನು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಎಸಿ ಟಿ.ಸುರೇಶ್ ಕುಮಾರ್, ತಹಶೀಲ್ದಾರ್ ಬಿ.ವಿ.ಗಿರೀಶ್ ಬಾಬು, ನಗರಸಭೆ ಪೌರಾಯುಕ್ತೆ ರೇಣುಕಾ ಎಸ್.ದೇಸಾಯಿ, ಇಒ ವೈ.ಎಚ್.ಚಂದ್ರಶೇಖರ್, ಡಿವೈಎಸ್ಪಿ ಡಾ.ಸಂತೋಷ್ ಚವ್ಹಾಣ್, ಲೋಕೋಪಯೋಗಿ ಇಲಾಖೆ ಎಇಇ ರಾಘವೇಂದ್ರ, ಪಂಚಾಯತ್ ರಾಜ್ ಎಇಇ ಕುಬೇಂದ್ರ ನಾಯ್ಕ, ಬಿಇಒ ಎಚ್.ಲೇಪಾಕ್ಷಪ್ಪ, ಟಿಎಚ್‌ಒ ಅರವಿಂದ್ ಇದ್ದರು. 
ಬಳ್ಳಾರಿ

ಎಲ್ಲರೂ ನ್ಯಾಯಯುತ ಜೀವನ ಕಟ್ಟಿಕೊಳ್ಳಲಿ

ಗಾಯತ್ರಿ ಮಾಲಿಪಾಟೀಲ್

ಪ್ರಮುಖ ಮುಖ್ಯಾಂಶಗಳು

  • ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿಕೆ
  • 80ನೇ ಸ್ವಾತಂತ್ರ್ಯೋತ್ಸವ

ಹರಪನಹಳ್ಳಿ: ಮಹನೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಇಂದು ಜಗತ್ತಿನಲ್ಲಿ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಬೆಳೆದಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.

ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಶನಿವಾರ 80ನೇ ಸ್ವಾತಂತ್ರೊೃೀತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದ ಸಂವಿಧಾನದ ಆಶಯದಂತೆ ಮೂಲಭೂತ ಹಕ್ಕುಗಳ ಜತೆಗೆ ಕರ್ತ್ಯವ್ಯಗಳ ಪಾಲನೆ ನಮ್ಮೆಲ್ಲರ ಹೊಣೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ಸತ್ಯಾಂಶ ಅರಿಯಬೇಕು.

ಎಲ್ಲರೂ ನ್ಯಾಯಯುತ ಜೀವನ ಕಟ್ಟಿಕೊಳ್ಳಬೇಕು ಎಂದರು. ನಂತರ ವಿವಿಧ ಕ್ಷೇತ್ರ ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.