ಬಳ್ಳಾರಿಯ ಡಿಸಿ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಿ.ಜಿ.ಸಾಗರ ಬಣ) ವತಿಯಿಂದ ಸತ್ಯಾಗ್ರಹ ಧರಣಿ ನಡೆಯಿತು. ರಾಜ್ಯ ಸಂಘಟನಾ ಸಂಚಾಲಕ ಎ.ಮಾನಯ್ಯ, ಸಂಘದ ಪದಾಧಿಕಾರಿಗಳಾದ ಕೆ.ಗಾದಿಲಿಂಗನಗೌಡ, ನರಸಪ್ಪ, ವಿ.ಎಸ್.ಶಿವಶಂಕರ್, ಎಚ್.ಬಿ.ಗಂಗಪ್ಪ, ದೇವದಾಸ, ಕೆ.ಎಚ್.ಆಂಜನೇಯ, ಬಿ.ರಮೇಶ್ ಇತರರಿದ್ದರು.
- ರಾಜ್ಯ ದಲಿತ ಸಂಘರ್ಷ ಸಮಿತಿ ಆಗ್ರಹ
ಬಳ್ಳಾರಿ : ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಇಲ್ಲಿನ ಡಿಸಿ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಿ.ಜಿ.ಸಾಗರ ಬಣ) ವತಿಯಿಂದ ಸತ್ಯಾಗ್ರಹ ನಡೆಯಿತು.
ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಎ.ಮಾನಯ್ಯ ಮಾತನಾಡಿ, ಕೇಂದ್ರ ಸರ್ಕಾರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ದೇಶದ ಯುವ ಜನತೆ ಭವಿಷ್ಯಕ್ಕೆ ತರುತ್ತಿರುವ ದೇಶದ ಪರೀಕ್ಷೆಗಳ ಅವ್ಯವಸ್ಥೆಯನ್ನು ಸರಿಪಡಿಸಬೇಕು. ಶಾಂತಿಯುತವಾತವಾಗಿ ಹೋರಾಟ ಮಾಡುತ್ತಿದ್ದ, ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್, ಟಯರ್ ಗ್ಯಾಸ್ ಬಿಟ್ಟು ವಿದ್ಯಾರ್ಥಿಗಳ ಮೇಲೆ ಅಮಾನುಷಿಕರವಾಗಿ ಥಳಿಸಿರುವುದನ್ನು ಖಂಡನೀಯವಾಗಿದೆ ಎಂದು ಕಿಡಿಕಾರಿದರು.
ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಪ್ರತಿಭಾವಂತ ವಿದ್ಯಾರ್ಥಿಗಳು ಜೀವ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಕೇವಲ ಬಂಡವಾಳಶಾಹಿಗಳ ಕೈಗೊಂಬೆಯಾಗಿ ಕೆಲಸ ಮಾಡುವ ಕೇಂದ್ರ ಬಿಜೆಪಿ ಸರ್ಕಾರಕ್ಕೆ ದೇಶದ ಯುವ ಜನತೆ ಭವಿಷ್ಯಕ್ಕೆ ಧಕ್ಕೆ ತರುತ್ತಿರುವ ಪರೀಕ್ಷೆಗಳ ಅವ್ಯವಸ್ಥೆ ಸರಿಪಡಿಸಿ ಸಂಪೂರ್ಣವಾಗಿ ಸುಧಾರಣೆ ತರಬೇಕು ಎಂದು ಆಗ್ರಹಿಸಿದರು. ಅಹಿಂಸಾ ಮಾದರಿಯ ಹೋರಾಟಕ್ಕೆ ದೇಶದಲ್ಲಿ ದೊಡ್ಡ ಇತಿಹಾಸವಿದೆ. ಅಸಹಕಾರ ಚಳುವಳಿ, ಉಪವಾಸ ಸತ್ಯಾಗ್ರಹ ಹರತಾಳ ಮಾದರಿಯ ಹೋರಾಟಗಳಿಗೆ ಜಯ ಸಿಕ್ಕಿದ್ದು ಈ ಹೋರಾಟದ ಕಾರಣಗಳಿಂದ. ಆದರೆ, ಕೇಂದ್ರ ಇದನ್ನು ಹತ್ತಿಕ್ಕಲು ಹೊರಟಿದೆ ಎಂದು ವಾಗ್ದಳಿ ನಡೆಸಿದರು.