ಬಳ್ಳಾರಿ : ರಾಜ್ಯದ ಜನತೆ ಸಂಕಷ್ಟದಲ್ಲಿರುವಾಗ ರಾಜ್ಯ ಸರ್ಕಾರದ ಸಚಿವ ಹಾಗೂ ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ದುರದೃಷ್ಟಕರ ಎಂದು ಶಾಸಕ ಕೆ.ನೇಮಿರಾಜ್ ನಾಯ್ಕ ಟೀಕಿಸಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳಿಗೆ ಮುಂಬರುವ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷ ಸಂಘಟನೆಯ ದೃಷ್ಟಿಯಿಂದ ಮಾಚ್. 1ರಂದು ಹಗರಿಬೊಮ್ಮನಹಳ್ಳಿ ಮತ್ತು ಕೊಪ್ಪಳ ಸಮಾವೇಶ ನಡೆಯಲಿದೆ. ಅಲ್ಲದೇ, ಮಾಚ್ 27ರಂದು ವಿಜಯಪುರದಲ್ಲಿ ಕಲ್ಯಾಣ ಕರ್ನಾಟಕದ ನಾಲ್ಕು ಜಿಲ್ಲೆಗಳನ್ನೊಳಗೊಂಡ ಬೃಹತ್ ಸಮಾವೇಶ ಆಯೋಜಿಸಲಾಗುವುದು. ಈ ಸಮಾವೇಶವು ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಕಳೆದ ಆರು ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಈ ಹಣ ಯಾರ ಕೈ ಸೇರಿದೆ?. ಸರ್ಕಾರ ಗ್ಯಾರಂಟಿಗಳ ಗುಂಗಿನಲ್ಲಿ ನಿದ್ದೆ ಮಾಡುತ್ತಿದೆ ಎಂದು ವ್ಯಂಗವಾಡಿದರು.
ರಾಜ್ಯದಲ್ಲಿ ರೈತರ ಪರವಾಗಿರುವುದು ಕೇವಲ ಜೆಡಿಎಸ್‌ಮಾತ್ರ. ರಾಜ್ಯದಲ್ಲಿ ಸದ್ಯ ನೀರಾವರಿ ಯೋಜನೆಗಳು ಹಳ್ಳ ಹಿಡಿದಿದ್ದು, ರೈತರ ಅಭಿವೃದ್ಧಿ ಮರೀಚಿಕೆಯಾಗಿದೆ. ತನ್ನ ವೈಪಲ್ಯ ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.
ಕಲ್ಯಾಣ ಕರ್ನಾಟಕಕ್ಕೆ 5,000 ಕೋಟಿ ರೂ. ನೀಡುವುದಾಗಿ ಸರ್ಕಾರ ಬೊಬ್ಬೆ ಹೊಡೆಯುತ್ತಿದೆ. ಆದರೆ ಕೆಕೆಆರ್‌ಡಿಬಿ ಸಮಿತಿಯಲ್ಲಿ ಕೇವಲ ಕಾಂಗ್ರೆಸ್ ಶಾಸಕರೇ ತುಂಬಿಕೊಂಡಿದ್ದು, ಸಮರ್ಪಕವಾಗಿ ಅನುದಾನ ವಿತರಿಸದೆ ಅಭಿವೃದ್ಧಿಯನ್ನು ಕುಂಠಿತಗೊಳಿಸಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ 4 ಲಕ್ಷಕ್ಕೂ ಅಧಿಕ ಮನೆಗಳನ್ನು ನೀಡಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಧೈರ್ಯವಿದ್ದರೆ ಸರ್ಕಾರ ಆ ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ,