- ಪಕ್ಷದ ಸಭೆಯ ಬಗ್ಗೆ ಯಾವುದೇ ಕರೆ ಬಂದಿಲ್ಲ
- ಹೈಕಮಾಂಡ್ ನಿರ್ಧಾರಕ್ಕೆ ಬದ್ಧ
ಬಳ್ಳಾರಿ : ರಾಜ್ಯ ಸರ್ಕಾರ ಸಚಿವ ಸಂಪುಟ ಪುನಾರಚನೆ ಮಾಡಿದರೆ, ಜಿಲ್ಲೆಯ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಲಿ ಎಂದು ಶಾಸಕ ನಾರಾ ಭರತರೆಡ್ಡಿ ಹೇಳಿದರು.
ನಗರದ ಪಾಲಿಕೆ ಆವರಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಎಂ ಬದಲಾವಣೆ ಬಗ್ಗೆ ಮಾಹಿತಿಯಿಲ್ಲ. ಹೈಕಮಾಂಡ್‌ನಿಂದ ಶಾಸಕಾಂಗ ಪಕ್ಷದ ಸಭೆಯ ಬಗ್ಗೆ ಯಾವುದೇ ಕರೆ ಬಂದಿಲ್ಲ. ಆದರೆ, ಸಿಎಂ ಬದಲಾವಣೆಗೆ ಸಂಬಂಧಿಸಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವೆ. ಸಂಪುಟ ಪುನಾರಚನೆಯಾದರೆ ಶಾಸಕ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ನನ್ನ ಒತ್ತಾಯವಾಗಿದೆ ಎಂದರು.