ಕೆ.ಜಿ.ಶಾಂತಿ  
ಬಳ್ಳಾರಿ

ಡಿ.13ರಂದು ವರ್ಷದ ಕೊನೆಯ ರಾಷ್ಟ್ರೀಯ ಲೋಕ ಅದಾಲತ್

ಪ್ರಮುಖ ಮುಖ್ಯಾಂಶಗಳು

  • ಲೋಕ ಅದಾಲತ್
  • ನ್ಯಾಯಾಲಯ
  • ಪ್ರಕರಣ
ರಾಷ್ಟ್ರೀಯ ಲೋಕ ಅದಾಲತ್ ಡಿ.13
ಬಳ್ಳಾರಿ : ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆ ದಿನಂದು 15 ಬೆಂಚ್‌ಗಳಲ್ಲಿ ಲೋಕ ಅದಾಲತ್ ನಡೆಯಲಿದ್ದು, ಅಂದು ಬಗೆಹರಿಸಬಹುದಾದ ನಾನಾ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಹಾಗೂ ನ್ಯಾಯಾಲಯದ ಶುಲ್ಕ ಮರು ಪಾವತಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಒಟ್ಟು 35,533 ಬಾಕಿ ಪ್ರಕರಣಗಳಲ್ಲಿ 8,961 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಗುರುತಿಸಲಾಗಿದೆ. ಅದರಲ್ಲಿ 4,178 ಪ್ರಕರಣಗಳ ಉಭಯ ಕಕ್ಷಿದಾರರು ರಾಜಿ ಮಾತುಕತೆಯ ಮೂಲಕ ಇತ್ಯರ್ಥಕ್ಕೆ ಒಪ್ಪಿಕೊಂಡಿದ್ದಾರೆ ಎಂದು ವಿವರಿಸಿದರು.
ವೈವಾಹಿಕ, ಕೌಟುಂಬಿಕ, ಮೋಟಾರು ಅಪಘಾತ, ಚೆಕ್ ಅಮಾನ್ಯದ, ವಾಣಿಜ್ಯ, ಸೇವಾ ಪ್ರಕರಣಗಳು ಮತ್ತು ರಾಜಿಯಾಗಬಲ್ಲ, ಗ್ರಾಹಕ ವ್ಯಾಜ್ಯ, ಡಿಆರ್‌ಟಿ, ಪಾಲುದಾರಿಕೆ, ಸಾರಿಗೆ ಹಾಗೂ ಇತರೆ ಸಿವಿಲ್ ಪ್ರಕರಣಗಳು ಸೇರಿದಂತೆ ಎಲ್ಲ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದರು.
ವೈವಾಹಿಕ, ಕೌಟುಂಬಿಕ, ಮೋಟಾರು ಅಪಘಾತ, ಚೆಕ್ ಅಮಾನ್ಯದ, ವಾಣಿಜ್ಯ, ಸೇವಾ ಪ್ರಕರಣಗಳು ಮತ್ತು ರಾಜಿಯಾಗಬಲ್ಲ, ಗ್ರಾಹಕ ವ್ಯಾಜ್ಯ, ಡಿಆರ್‌ಟಿ, ಪಾಲುದಾರಿಕೆ, ಸಾರಿಗೆ ಹಾಗೂ ಇತರೆ ಸಿವಿಲ್ ಪ್ರಕರಣಗಳು ಸೇರಿದಂತೆ ಎಲ್ಲ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಇದ್ದರು.