ಬಳ್ಳಾರಿಯ ಪಾಂಚಜನ್ಯ ಸಭಾಂಗಣದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಜಯಂತಿ ಆಚರಿಸಲಾಯಿತು. ನಿ.ಉಪನ್ಯಾಸಕ ಎನ್.ಬಸವರಾಜ್, ನಿ.ಮುಖ್ಯಗುರು ಎಂ.ವೇಣುಗೋಪಾಲ, ಎಬಿವಿಪಿ ನಗರಾಧ್ಯಕ್ಷ ಜಗದೀಶ್ ಕನುಗೋಲು, ವಿದ್ಯಾರ್ಥಿ ಶಿಕ್ಷಣ ಸಂಸ್ಕೃತಿ ಸೇವಾ ಸಮಿತಿ ಕಾರ್ಯದರ್ಶಿ ಎಂ.ಮಲ್ಲಿಕಾರ್ಜುನ ಇದ್ದರು 
ಬಳ್ಳಾರಿ

ದೇಶಕ್ಕೆ ನೇತಾಜಿ ಸೇವೆ ಅಪಾರ

ಪ್ರಮುಖ ಮುಖ್ಯಾಂಶಗಳು

  • ಸಭಾಂಗಣ
ಬಳ್ಳಾರಿ : ನೇತಾಜಿ ಸುಭಾಷ್ ಚಂದ್ರಬೋಸ್ ಅವರು ದೇಶದ ಸ್ವಾತಂತ್ರ ಹೋರಾಟದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ನಿವೃತ್ತ ಉಪನ್ಯಾಸಕ ಎನ್.ಬಸವರಾಜ್ ಹೇಳಿದರು.
ನಗರದ ಪಾಂಚಜನ್ಯ ಸಭಾಂಗಣದಲ್ಲಿ ವಿದ್ಯಾರ್ಥಿ ಶಿಕ್ಷಣ ಸೇವಾ ಸಂಸ್ಕೃತಿ ಸೇವಾ ಸಮಿತಿ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಘಟಕದಿಂದ ಮಂಗಳವಾರ ಆಯೋಜಿಸಿದ್ದ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 129ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶಕ್ಕಾಗಿ ನೇತಾಜಿ ಮಾಡಿದ ಅಪ್ರತಿಮ ಸಾಧನೆಯನ್ನು, ಪ್ರತಿಯೊಬ್ಬ ಭಾರತೀಯರು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ನನ್ನ ದೇಶ, ನನ್ನ ಜನ ಸೇವಾಕಾರ್ಯದಲ್ಲಿ ಸದಾ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
===