ಬಳ್ಳಾರಿಯ ಎಸ್ಪಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಮಾತನಾಡಿದರು. ಎಎಸ್ಪಿ ಕೆ.ಪಿ.ರವಿಕುಮಾರ ಇದ್ದರು. === 
ಬಳ್ಳಾರಿ

ಅಧಿಕಾರಿಗಳು ಸಮನ್ವಯ ಸಾಧಿಸಿ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ನ್ಯಾಯಾಧೀಶ
  • ಘಟನೆ
  • ಮಕ್ಕಳ
ಬಳ್ಳಾರಿ : ಕೆಲ ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಪ್ರಕರಣ ಪರಿಹರಿಸಲು ನಾನಾ ಇಲಾಖೆಗಳೊಂದಿಗೆ ಅಧಿಕಾರಿಗಳು ಸಮನ್ವಯ ಸಾಧಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಹೇಳಿದರು.
ನಗರದ ಎಸ್ಪಿ ಕಚೇರಿ ಸಭಾಂಗಣದಲ್ಲಿ ನಾನಾ ಇಲಾಖೆಗಳ ಅಧಿಕಾರಿಗಳು ಮತ್ತು ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಮುಖ್ಯಸ್ಥರು, ಪ್ಯಾರಾಲೀಗಲ್ ವಾಲಂಟರ್ಸ್‌ಗಳೊಂದಿಗೆ ಸೋಮವಾರ ಆಯೋಜಿಸಿದ್ದ ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿಯ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಸರ್ಕಾರೇತರ ಶಾಲಾ-ಕಾಲೇಜು, ವಸತಿ ನಿಲಯಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಗ್ರಾಪಂ ಮಟ್ಟದಲ್ಲಿ ಮಹಿಳೆಯರು ಮತ್ತು ಮಕ್ಕಳ ಕಾವಲು ಸಭೆ ಹಮ್ಮಿಕೊಂಡು ಕಾಣೆಯಾದ ಮಕ್ಕಳ ಕುರಿತು ಮಾಹಿತಿ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಕಾಣೆಯಾಗಿರುವ ಮಕ್ಕಳ ಹಲವು ಪ್ರಕರಣಗಳಲ್ಲಿ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಇತ್ಯರ್ಥಪಡಿಸಲು ಕ್ರಮವಹಿಸಬೇಕು. ಈವರೆಗೆ ಇತ್ಯರ್ಥವಾಗದೆ ಬಾಕಿಯಿರುವ ಪ್ರಕರಣಗಳ ಮಾಹಿತಿಯನ್ನು ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ ಪ್ರತಿ ಮಾಹೆ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಕಾರ್ಯಪಡೆ ರಚಿಸಲಾಗಿದೆ. ಕಾಣೆ ಹಾಗೂ ಪತ್ತೆಯಾಗದ ಮಕ್ಕಳ ಪಟ್ಟಿ ಸಿದ್ಧಪಡಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಎಎಸ್ಪಿ ಕೆ.ಪಿ ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಪೋಕ್ಸೋ ಘಟನೆ ಕಂಡುಬಂದಲ್ಲಿ ಯಾವುದೇ ವಿಳಂಬ ಇಲ್ಲದೇ ಕೂಡಲೇ ಎಫ್‌ಐಆರ್ ದಾಖಲಿಸಲು ಮುತುವರ್ಜಿ ವಹಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಭಿತ್ತಿಪತ್ರ ಬಿಡುಗಡೆಗೊಳಿಸಿದರು.