ಬಳ್ಳಾರಿಯ ಅಂದ್ರಾಳ್ ಬಳಿ ಸರ್ಕಾರಿ ಒತ್ತುವರಿಯಾದ ಸರ್ಕಾರಿ ಭೂಮಿಯನ್ನು ಎಡಿಸಿ ಮಹಮ್ಮದ ಎನ್.ಜುಬೇರ್ ನೇತೃತ್ವದಲ್ಲಿ ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.
ಬಳ್ಳಾರಿ : ನಗರದ ಹೊರವಲಯದ ಅಂದ್ರಾಳ್‌ನ ಬೈಪಾಸ್ ರಸ್ತೆಯ ಬಳಿ ಒತ್ತುವರಿಯಾದ ಸರ್ಕಾರಿ ಭೂಮಿಯನ್ನು ಜಿಲ್ಲಾಡಳಿತದಿಂದ ಬುಧವಾರ ತೆರವು ಕಾರ್ಯಾಚರಣೆ ನಡೆಯಿತು.
ಎಡಿಸಿ ಮಹಮ್ಮದ್ ಎನ್. ಜುಬೇರ್ ಮಾತನಾಡಿ, ಜಿಲ್ಲಾಡಳಿತದ ಈ ದಿಟ್ಟ ಕ್ರಮವು ಸರ್ಕಾರಿ ಆಸ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿದ್ದು, ಈ ಒತ್ತುವರಿಯ ಹಿಂದೆ ಯಾರೇ ಇದ್ದರೂ ಮತ್ತು ಪ್ರಚೋದನೆ ನೀಡುತ್ತಿದ್ದರೂ ಅವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದರೆ ಅಥವಾ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು
ಬಳಿಕ ಅಂದ್ರಾಳ್ ಗ್ರಾಮದ ಸರ್ವೇ ನಂಬರ್ ಒಂದರಲ್ಲಿ ಮೂರು ಎಕರೆಗೂ ಅಧಿಕ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. ಇಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಸಿಮೆಂಟ್ ಕಟ್ಟಡಗಳು ಮತ್ತು ಇತರ ನಿರ್ಮಾಣಗಳನ್ನು ಜಿಲ್ಲಾಡಳಿತವು ಜೆಸಿಬಿ ಯಂತ್ರಗಳ ಸಹಾಯದಿಂದ ತೆರವುಗೊಳಿಸಿತು.