ಬಳ್ಳಾರಿಯ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರವನ್ನು ಹೊಸಪೇಟೆ ವಿಭಾಗದ ಅಬಕಾರಿ ಜಂಟಿ ಆಯುಕ್ತೆ ಶೈಲಜಾ ಕೋಟೆ ಉದ್ಘಾಟಿಸಿದರು. ಅಬಕಾರಿ ಇಲಾಖೆಯ ಉಪ ಆಯುಕ್ತೃರಾದ ಡಾ.ಪಿ.ಮಾದೇಶ್, ಎನ್.ಮಂಜುನಾಥ, ಎಂಎಸ್‌ಟಿಸಿ ಲಿಮಿಟೆಡ್ ವ್ಯವಸ್ಥಾಪಕ ಸತೀಶ್ ಕುಮಾರ್ ಇತರರಿದ್ದರು. 
ಬಳ್ಳಾರಿ

ಆನ್‌ಲೈನ್‌ನಲ್ಲಿ ಹರಾಜು

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಅಧಿಕೃತ ವೆಬ್‌ಸೈಟ್‌ನಲ್ಲಿ ನೋಂದಣಿ
ಬಳ್ಳಾರಿ : ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವವರು ಅವಳಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿರದೆ, ರಾಜ್ಯದ ಯಾವುದೇ ಜಿಲ್ಲೆಯಲ್ಲಾದರೂ ಬಿಡ್ ಮಾಡಬಹುದು ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಅಬಕಾರಿ ಇಲಾಖೆ ವತಿಯಿಂದ ಅಬಕಾರಿ ಸನ್ನದುಗಳ ಇ-ಹರಾಜು ಕುರಿತು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಸಂಭಾವ್ಯ ಬಿಡ್ಡುದಾರರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ರಾಜ್ಯ ಸರ್ಕಾರವು ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಎಲ್-2ಎ ಮತ್ತು ಸಿಎಲ್-9ಎ ಸನ್ನದುಗಳ ಇ-ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು ಹತ್ತು ಸಿಎಲ್-2ಎ ಮಳಿಗೆಗಳು ಮತ್ತು 2 ಸಿಎಲ್-9ಎ ಸನ್ನದುಗಳಿದ್ದು, ಇವುಗಳಿಗೆ ಹರಾಜು ಪ್ರಕ್ರಿಯೆ ನಡೆಯಲಿದೆ. ಹರಾಜಿನಲ್ಲಿ ಭಾಗವಹಿಸಲು ಬಯಸುವವರು ಕಡ್ಡಾಯವಾಗಿ ಎಂಎಸ್‌ಟಿಸಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಆನ್‌ಲೈನ್ ವ್ಯಾಲೆಟ್‌ನಲ್ಲಿ ಇಎಂಡಿ ಬ್ಯಾಲೆನ್ಸ್ ಕಾಯ್ದುಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದರು.
ನೇರ ಹರಾಜು ಪ್ರಕ್ರಿಯೆಯು ಜು.28ರಂದು ನಡೆಯಲಿದ್ದು, ಬಿಡ್‌ದಾರರು ಜು.26 ರೊಳಗಾಗಿ ಎಲ್ಲ ನೋಂದಣಿ ಹಾಗೂ ಶುಲ್ಕ ಪಾವತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಆನ್‌ಲೈನ್ ಬಿಡ್ಡಿಂಗ್‌ಗಾಗಿ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ಗಳನ್ನು ಬಳಸಿ ತಾವಿದ್ದಲ್ಲಿಯೇ ಭಾಗವಹಿಸಬಹುದು ಎಂದರು.