ಬಳ್ಳಾರಿಯ ಗಡಗಿ ಚನ್ನಪ್ಪ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕೃತಿ ದಹನಗೊಳಿಸಿ ಪ್ರತಿಭಟಿಸಲಾಯಿತು. ಮುಖಂಡರಾದ ಅಡವಿಸ್ವಾಮಿ, ರಾಮಲಿಂಗಪ್ಪ, ರುದ್ರೇಶ್, ರಾಜ, ಶೇಖರಪ್ಪ ಇತರರಿದ್ದರು.
ಬಳ್ಳಾರಿ : ದೆಹಲಿಯಲ್ಲಿ ಎಐ ಇಂಪ್ಯಾಕ್ಟ್ ಶೃಂಗಸಭೆ ಕಾರ್ಯಕ್ರಮದ ನಡೆಯುತ್ತಿರುವ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಅಶ್ಲೀಲ ವರ್ತನೆ ಖಂಡಿಸಿ, ಬಿಜೆಪಿ ಜಿಲ್ಲಾ ಘಟಕದಿಂದ ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಯುವ ಕಾಂಗ್ರೆಸ್ ಕಾರ್ಯಕರ್ತರ ನಡೆ ದೇಶದ ಗೌರವಕ್ಕೆ ಧಕ್ಕೆ ತರುವಂತದ್ದಾಗಿದೆ. ಅಂತರಾಷ್ಟ್ರೀಯ ವೇದಿಕೆಯಲ್ಲಿ ಇಂತಹ ವರ್ತನೆ ತೋರಿಸುವುದು ನಾಚಿಕೆಗೇಡಿತನವಾಗಿದೆ. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ದೇಶದ ಮರ್ಯಾದೆಯನ್ನು ಕಾಪಾಡುವುದು ಎಲ್ಲರ ಕರ್ತವ್ಯ ಎಂದು ಪ್ರತಿಭಟನಕಾರರು ಕಾಂಗ್ರೆಸ್ ವಿರುದ್ಧ ವಾಗ್ದಳಿ ನಡೆಸಿದರು. ಬಳಿಕ ಘಟನೆ ಖಂಡಿಸಿ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಪ್ರತಿಕೃತಿ ದಹನಗೊಳಿಸಿದರು. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿ, ಯುವ ಕಾಂಗ್ರೆಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.