ದೇವದುರ್ಗ ಗೌರಂಪೇಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಕಾರ್ಯಕ್ರಮವನ್ನು ಶಾಸಕಿ ಕರೆಮ್ಮ ಜಿ.ನಾಯಕ ಉದ್ಘಾಟಿಸಿದರು. ಪ್ರಮುಖರಾದ ಶರಣಪ್ಪ ಬಳೆ, ಬಸನಗೌಡ ದೇಸಾಯಿ, ನಾಗರಾಜ ನಿಲೋಗಲ್, ಶಿವನಗೌಡ ಪೊಪಾ, ಸುಭಾಷ ಬೇವಿನಗಿಡ, ಮಾಹದೇವಪ್ಪ ಚಿಕ್ಕಬೂದೂರು ಇತರರಿದ್ದರು. 
ಬಳ್ಳಾರಿ

ಸ್ವಚ್ಛ ಸುಂದರ ನಗರ ನಿರ್ಮಾಣಕ್ಕೆ ಆದ್ಯತೆ

ಪ್ರಮುಖ ಮುಖ್ಯಾಂಶಗಳು

  • ವಿವಿಧ
  • ಅಭಿವೃದ್ಧಿ
  • ಚಾಲನೆ
ದೇವದುರ್ಗ: ಪಟ್ಟಣವನ್ನು ಸ್ವಚ್ಛ ಹಾಗೂ ಸುಂದರ ನಗರವನ್ನಾಗಿ ನಿರ್ಮಾಣ ಮಾಡುವುದು ನನ್ನ ಮೊದಲ ಆದ್ಯತೆಯಾಗಿದೆ. ಹೀಗಾಗಿ ಎರಡನೇ ಹಂತದಲ್ಲಿ 6.6ಕೋಟಿ ರೂ.ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕಿ ಕರೆಮ್ಮ ಜಿ.ನಾಯಕ ಹೇಳಿದರು.
ಪಟ್ಟಣದ ಗೌರಂಪೇಟೆಯಲ್ಲಿ 6.60ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಂಗಳವಾರ ಮಾತನಾಡಿದರು.
ಸಿಸಿ ರಸ್ತೆ, ಒಳಚರಂಡಿ, ಬೀದಿದೀಪ, ರಸ್ತೆ ವಿಭಜಕ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಮೊದಲ ಹಂತದಲ್ಲಿ ಹಲವು ಕಡೆ ಬೀದಿದೀಪ, ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಪಟ್ಟಣದ ಸ್ವಚ್ಛತೆ, ಕುಡಿವ ನೀರು ಸೇರಿ ಅಗತ್ಯ ಸೌಲಭ್ಯ ಕಲ್ಪಿಸಲು ಶ್ರಮಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಉತ್ತಮ ಉದ್ಯಾನ ನಿರ್ಮಾಣ ಮಾಡಲಾಗುವುದು ಎಂದರು.
ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಜನರ ಸಹಕಾರ ಮುಖ್ಯವಾಗಿದೆ. ಮೂರು ವರ್ಷದ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಸೇರಿ ವಿವಿಧ ಯೋಜನೆಯಡಿ ನೂರಾರು ಕೋಟಿ ರೂ. ಅನುದಾನ ತಂದಿದ್ದೇನೆ.
ಹೊಸ ಹಾಸ್ಟೆಲ್, ಆಸ್ಪತ್ರೆ, ಶಾಲಾ ಕಾಲೇಜು ಕಟ್ಟಡ ನಿರ್ಮಾಣಕ್ಕೂ ಆದ್ಯತೆ ನೀಡಿದ್ದೇನೆ. ಪ್ರತಿಯೊಂದು ಹಳ್ಳಿಗೂ ಮೂಲಸೌಲಭ್ಯ ಕಲ್ಪಿಸುವುದು ನನ್ನ ಕನಸಾಗಿದೆ. ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ನಿರ್ವಹಿಸಬೇಕು ಎಂದರು.