ಬಳ್ಳಾರಿಯ ವಿಎಸ್‌ಕೆ ವಿವಿ ಆವರಣದಲ್ಲಿ ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ಪದವಿ ಶುಲ್ಕ ಹೆಚ್ಚಳ ಖಂಡಿಸಿ, ಪ್ರತಿಭಟನೆ ನಡೆಯಿತು. ರಾಜ್ಯ ಖಜಾಂಚಿ ಬೆಟ್ಟದಕೊಪ್ಪ, ಪದಾಧಿಕಾರಿಗಳಾದ ರವಿಕಿರಣ್, ಕೆ.ಈರಣ್ಣ, ಕಂಬಳಿ ಮಂಜುನಾಥ್, ಎಂ. ಶಾಂತಿ, ನಿಹಾರಿಕಾ ಇದ್ದರು. 
ಬಳ್ಳಾರಿ

ಶುಲ್ಕ ಹೆಚ್ಚಳ ಖಂಡಿಸಿ, ಪ್ರತಿಭಟನೆ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಎಐಡಿಎಸ್‌ಒ ನೇತೃತ್ವದಲ್ಲಿ

ಬಳ್ಳಾರಿ :

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವ್ಯಾಪ್ತಿಯ ಪದವಿ ಕಾಲೇಜುಗಳ ವಿದ್ಯಾರ್ಥಿಗಳ ಪ್ರವೇಶಾತಿ ಶುಲ್ಕ ಹೆಚ್ಚಳ ಖಂಡಿಸಿ, ಎಐಡಿಎಸ್‌ಒ ನೇತೃತ್ವದಲ್ಲಿ ವಿಶ್ವವಿದ್ಯಾಲಯ ಚಲೋ ಪ್ರತಿಭಟನೆ ನಡೆಯಿತು.

ಎಐಡಿಎಸ್‌ಒ ರಾಜ್ಯ ಖಜಾಂಚಿ ಬೆಟ್ಟದಕೊಪ್ಪ ಮಾತನಾಡಿ, ಪ್ರಸ್ತಕ ಸಾಲಿನಲ್ಲಿ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶ ಶುಲ್ಕ 550 ರೂ. ಹಾಗೂ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳ ಶುಲ್ಕ 1,300 ರೂ. ಹೆಚ್ಚಿಸಿರುವುದು ವಿದ್ಯಾರ್ಥಿ ವಿರೋಧಿ ಕ್ರಮವಾಗಿದೆ ಎಂದು ಆರೋಪಿಸಿದರು.
2024-25ರಲ್ಲಿ 3,490 ರೂ. ಹಾಗೂ 2025- 26ರಲ್ಲಿ 3,739 ರೂ. ಶುಲ್ಕವನ್ನು 2026- 27ರಲ್ಲಿ 5,039 ರೂ. ಕ್ಕೆ ಏರಿಸಲಾಗಿದೆ. ನಗರದ ಸಿಟಿ ಪದವಿ ಕಾಲೇಜಿನಲ್ಲಿ ಒಟ್ಟು ಶುಲ್ಕ 6,439 ರೂ. ಕ್ಕೆ ತಲುಪಿದೆ. ಬರಗಾಲದಿಂದ ರೈತ ಕುಟುಂಬಗಳು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಇಂತಹ ಶುಲ್ಕ ಹೆಚ್ಚಳವು ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಉಂಟುಮಾಡಲಿದೆ ಎಂದು ಹೇಳಿದರು.
ವಿಜಯನಗರ ಜಿಲ್ಲಾಧ್ಯಕ್ಷ ರವಿಕಿರಣ್ ಮಾತನಾಡಿ, ಶಿಕ್ಷಣ ಎಲ್ಲರಿಗೂ ಲಭ್ಯವಾಗಬೇಕೆಂಬ ಸಮಾಜ ಸುಧಾರಕರ ಆಶಯಕ್ಕೆ ವಿರುದ್ಧವಾಗಿ ಶಿಕ್ಷಣ ಕ್ಷೇತ್ರದಲ್ಲಿ ಖಾಸಗೀಕರಣ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷ ಕೆ. ಈರಣ್ಣ ಮಾತನಾಡಿ, ವಿಶ್ವವಿದ್ಯಾಲಯಗಳ ಅಭಿವೃದ್ಧಿಗೆ ಸರ್ಕಾರ ಸಮರ್ಪಕ ಅನುದಾನ ನೀಡದ ಕಾರಣ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಸರ್ಕಾರ ಮಧ್ಯಪ್ರವೇಶಿಸಿ ವಿವಿಗಳಿಗೆ ಅಗತ್ಯ ಅನುದಾನ ಒದಗಿಸಿ, ವಿದ್ಯಾರ್ಥಿಗಳ ಮೇಲಿನ ಶುಲ್ಕದ ಭಾರವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.
===