ಕಂಪ್ಲಿಯಲ್ಲಿ ಕೃಷಿ ಇಲಾಖೆ ಉಪ ನಿರ್ದೇಶಕ ಎಸ್.ಎನ್.ಮಂಜುನಾಥಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.  
ಬಳ್ಳಾರಿ

ಅಗತ್ಯಕ್ಕೆ ತಕ್ಕಷ್ಟು ರಸಗೊಬ್ಬರ ಪೂರೈಸಲಿ

ಅಶೋಕ್ ಕುಮಾರ್ ಎನ್
ಕಂಪ್ಲಿ: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ರದ್ದುಗೊಳಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಕೃಷಿ ಇಲಾಖೆ ಉಪನಿರ್ದೇಶಕ ಎಸ್.ಎನ್.ಮಂಜುನಾಥಗೆ ಸೋಮವಾರ ಮನವಿ ಸಲ್ಲಿಸಿದರು.
ಸಂಘದ ಕಾರ್ಯಾಧ್ಯಕ್ಷ ಬಿ.ವಿ.ಗೌಡ ಮಾತನಾಡಿ, ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯಗೊಳಿಸಿರುವುದರಿಂದ ರೈತರಿಗೆ ತೊಂದರೆಯಾಗಿದೆ. ಎಕರೆಗೆ 3ರಿಂದ 5 ಚೀಲ ಯೂರಿಯಾ ರಸಗೊಬ್ಬರ ಬಳಸುವ ವಾಡಿಕೆ ಇದೆ. ರಾಜ್ಯ ಸರ್ಕಾರ ಒಂದು ಚೀಲ ಯೂರಿಯಾ ವಿತರಣೆಗೆ ಮುಂದಾಗಿರುವುದು ಸರಿಯಲ್ಲ. ರಸಗೊಬ್ಬರ ಕಡಿತಗೊಂಡಲ್ಲಿ ಬೆಳೆ ಇಳುವರಿ ಕುಂಠಿತಗೊಳ್ಳುವ ಅಪಾಯ ಇದೆ. ಎಫ್‌ಐಡಿ ಕಡ್ಡಾಯ ಮತ್ತು ಒಂದು ಚೀಲ ಯೂರಿಯಾ ಒದಗಿಸುವ ತೀರ್ಮಾನವನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದರು.
ಶಾಸಕ ಜೆ.ಎನ್.ಗಣೇಶಗೂ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಸಿರಗುಪ್ಪದ ಸಹಾಯಕ ಕೃಷಿ ನಿರ್ದೇಶಕ ಮಂಜುನಾಥರೆಡ್ಡಿ, ಪ್ರಭಾರ ಎಒ ಟಿ.ಜ್ಯೋತಿ, ಸಂಘದ ಪದಾಧಿಕಾರಿಗಳಾದ ತಿಮ್ಮಪ್ಪ ನಾಯಕ, ಕೊಟ್ಟೂರು ರಮೇಶ, ಡಿ.ಮುರಾರಿ, ತಾಯಪ್ಪ, ವಿ.ಟಿ.ರಾಜು, ಟಿ.ಗಂಗಣ್ಣ ಇತರರಿದ್ದರು.