ಬಳ್ಳಾರಿಯ ಕಂಬಳಿ ಬಜಾರ್‌ನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿ ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದರು. ಠಾಣಾ ಪಿಎಸ್‌ಐ ರಫೀಕ್, ಸಿಬ್ಬಂದಿ ಕೋನಪ್ಪ, ವೀರೇಶ್, ಅನಿತ ಇತರರಿದ್ದರು. 
ಬಳ್ಳಾರಿ

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಇಬ್ಬರು ಸಂತ್ರಸ್ತ ಮಹಿಳೆಯರು ರಕ್ಷಣೆ
  • ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ
ಬಳ್ಳಾರಿ : ನಗರದ ಕಂಬಳಿ ಬಜಾರ್‌ನ ಮನೆಯೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು, ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲ ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಲ್ಲಿನ ಕಂಬಳಿ ಬಜಾರ್‌ನ ಅಭರಣ ಅಂಗಡಿ ಕಾವಲುಗಾರ ಕೆ. ಬ್ರಹ್ಮಯ್ಯಚಾರಿ, ಆತನ ಪತ್ನಿ ವಿಶಾಲಾಕ್ಷಿ , ಬಿಸಿಲಹಳ್ಳಿ ಗ್ರಾಮದ ವೆಂಕಟೇಶ್ ಹಾಗೂ ಆಂಧ್ರದ ಅನಂತಪುರ ಜಿಲ್ಲೆಯ ಪೆಟ್ಟೂರು ಗ್ರಾಮದ ಪಿ. ನಾಗರಾಜ ಬಂಧಿತರು.
ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಕಳುಹಿಸಲಾಗಿದೆ. ದಾಳಿ ವೇಳೆ ದಂಧೆಯಲ್ಲಿ ಸಿಲುಕಿದ್ದ ಇಬ್ಬರು ಸಂತ್ರಸ್ತ ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ. ಜತೆಗೆ ಸ್ಥಳದಲ್ಲಿದ್ದ ಇಬ್ಬರು ಗ್ರಾಹಕರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಜು.20 ರಂದು ಲಭ್ಯವಾದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
===