ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಡಿಸಿ ಕೆ. ನಾಗೇಂದ್ರ ಪ್ರಸಾದ್ ಮಾತನಾಡಿದರು. ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಎಸಿ ರಾಜೇಶ್ ಎಚ್.ಡಿ., ಡಿಎಚ್‌ಒ ಡಾ.ವೈ.ರಮೇಶಬಾಬು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಬ್ದುಲ್ ರೆಹಮಾನ್ ಇದ್ದರು 
ಬಳ್ಳಾರಿ

ಬೊರ್‌ವೆಲ್‌ಗಳು ದುರಸ್ತಿ ಕೈಗೊಳ್ಳಿ

ಪ್ರಮುಖ ಮುಖ್ಯಾಂಶಗಳು

  • ಬೊರ್‌ವೆಲ್‌
ಬಳ್ಳಾರಿ : ಕುಡಿವ ನೀರಿಗೆ ಸಮಸ್ಯೆಯಾಗಬಹುದಾದ ಗ್ರಾಮಗಳಲ್ಲಿ ಸರ್ಕಾರಿ ಬೋರ್‌ವೇಲ್ ಗುರುತಿಸಿ, ಒಂದು ವೇಳೆ ಕೆಟ್ಟಿದ್ದಲ್ಲಿ ದುರಸ್ತಿಗೊಳಿಸಿ ಎಂದು ಡಿಸಿ ಕೆ. ನಾಗೇಂದ್ರ ಪ್ರಸಾದ್ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮಾತನಾಡಿದರು. ನಂತರ ಖಾಸಗಿ ಬೊರ್‌ವೆಲ್‌ಗಳನ್ನು ಕೂಡ ಗುರುತಿಸಿಟ್ಟುಕೊಳ್ಳಬೇಕು. ಇಲ್ಲವಾದಲ್ಲಿ ಹೊಸ ಬೋರ್‌ವೆಲ್ ಕೊರೆಸಲು ಆದ್ಯತೆ ನೀಡಬೇಕು. ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮೀಣದಲ್ಲಿ 21, ಕಂಪ್ಲಿ 16, ಕುರುಗೋಡು 15, ಸಂಡೂರು 3, ಸಿರಗುಪ್ಪ ತಾಲೂಕಿನ 28 ಗ್ರಾಮಗಳು ಸೇರಿದಂತೆ ಒಟ್ಟು 83 ಗ್ರಾಮಗಳಲ್ಲಿ ಬೇಸಿಗೆಯಲ್ಲಿ ಒಂದು ವೇಳೆ ಮಳೆ ಬಾರದಿದ್ದರೆ, ನೀರಿನ ಸಮಸ್ಯೆ ಉದ್ಭವಿಸಬಹುದು ಆ ಗ್ರಾಮಗಳ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ನಿಗಾವಹಿಸಬೇಕು. ಜಿಲ್ಲೆಯಲ್ಲಿ ಒಟ್ಟು 504 ಆರ್‌ಒ ಘಟಕಗಳಿದ್ದು, 454 ಕಾರ್ಯನಿರ್ವಹಿಸುತ್ತಿವೆ. ಉಳಿದ 54 ಆರ್‌ಒ ಘಟಕಗಳ ನಿರ್ವಹಣೆಗೆ ಕ್ರಮವಹಿಸಬೇಕು. ಕುಡಿವ ನೀರು ಎಲ್ಲೂ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕು ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಈ ಬಾರಿ ಎರಡನೇ ಬೆಳೆ ಇಲ್ಲವಾದುದರಿಂದ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಲ್ಬಣಗೊಳ್ಳದಂತೆ ಅಗತ್ಯ ಮೇವಿನ ದಾಸ್ತಾನು ಇಟ್ಟುಕೊಳ್ಳಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಮೇವಿನ ದಾಸ್ತಾನು(ಬಣವೆ), ಅರಣ್ಯ ಭಾಗದಲ್ಲಿ ಕಾಳ್ಗಿಚ್ಚು ಉಂಟಾಗದಂತೆ ಎಚ್ಚರವಹಿಸಬೇಕು. ಘಟನೆ ಸಂಭವಿಸಿದಲ್ಲಿ ಶಮನಗೊಳಿಸಲು ಸಿದ್ದರಿರಬೇಕು ಎಂದು ಅಗ್ನಿಶಾಮಕ ಅಧಿಕಾರಿಗಳಿಗೆ ತಿಳಿಸಿದರು.
ಮಾರ್ಚ್ ಅಂತ್ಯದಿಂದ ಮೇ ಅಂತ್ಯದವರೆಗೆ ಬಿಸಿಲಿನ ತಾಪಮಾನ ಅಲೆಗಳ ಪ್ರಖರತೆ ಹೆಚ್ಚಾಗುವ ಸಂಭವವಿದೆ. ಸತತ ಮೂರು ದಿನಗಳ ಕಾಲ 40 ಡಿಗ್ರಿ ಸೆಲ್ಸಿಯಸ್ ನಿರಂತರವಾಗಿ ತಾಪಮಾನ ಇದ್ದಲ್ಲಿ ಬಿಸಿಲಿನ ತಾಪಮಾನ ಅಲೆಗಳು ಎಂದು ಪರಿಗಣಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ. ಈ ಕುರಿತು ಸಾರ್ವಜನಿಕರಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಕುಡಿವ ನೀರಿನ ಸಮಸ್ಯೆ ಮತ್ತು ಮೇವಿನ ಕೊರತೆ ಉಂಟಾದಲ್ಲಿ ದೂರು ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಹಾಯವಾಣಿ ಆರಂಭಿಸಬೇಕು ಎಂದರು.