ಕುರುಗೋಡಿನಲ್ಲಿ ಅಂಬೇಡ್ಕರ್ ಹಾಗೂ ಬಾಬೂಜಿ ಭಾವಚಿತ್ರದ ಮೆರವಣಿಗೆ ಸಂದರ್ಭ ಪುರಸಭೆ ಅಧ್ಯಕ್ಷ ಟಿ. ಶೇಖಣ್ಣ, ತಹಸೀಲ್ದಾರ್ ನರಸಪ್ಪ, ಗ್ರೇಡ್ 2 ತಹಸೀಲ್ದಾರ್ ಮಲ್ಲೇಶಪ್ಪ, ಪ್ರಮುಖರಾದ ಶಿವಶಂಕರ, ಸಿದ್ದಪ್ಪ ಇತರರಿದ್ದರು. 
ಬಳ್ಳಾರಿ

ಸಮಸಮಾಜದ ವಿಚಾರಧಾರೆ ತಲುಪಿಸಲು ಸೆಮಿನಾರ್

ಕುರುಗೋಡು: ಮಹಿಳಾ ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯ ಒದಗಿಸಿದ ಅಂಬೇಡ್ಕರ್ ಪ್ರತಿಯೊಬ್ಬರಿಗೂ ದಾರಿದೀಪ ಎಂದು ತಹಸೀಲ್ದಾರ್ ನರಸಪ್ಪ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಕಚೇರಿ ಆವರಣದಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಅಂಬೇಡ್ಕರ್ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ. ಪ್ರತಿಯೊಬ್ಬರಿಗೂ ಸಂವಿಧಾನ ಶಿಲ್ಪಿಯ ವಿಚಾರಧಾರೆ ತಲುಪಿಸಲು ಮುಂದಿನ ದಿನಗಳಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗುವುದು ಎಂದರು.
ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಮಾತನಾಡಿ, ನಾಡಿಗೆ ಉತ್ತಮ ಅಡಿಪಾಯ ಹಾಕಿದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಬೆರಳೆಣಿಕೆಯಷ್ಟು ಜನ ಭಾಗವಹಿಸಿರುವುದು ಬೇಸರ ತರಿಸಿದೆ ಎಂದರು. ಅಂಬೇಡ್ಕರ್ ಹಾಗೂ ಬಾಬೂಬಿ ಭಾವಚಿತ್ರವನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು. ಶಿರಸ್ತೇದಾರ್ ವಿಜಯಕುಮಾರ, ಉಪತಹಸೀಲ್ದಾರ್ ರಾಜಶೇಖರ್, ಆರ್‌ಐ ಸುರೇಶ್, ಭದ್ರಿ, ಪಿಎಸ್‌ಐ ಸುಪ್ರೀತ್ ವಿರೂಪಾಕ್ಷಪ್ಪ, ಬಿಇಒ ಸಿದ್ದಲಿಂಗಯ್ಯಮೂರ್ತಿ, ಕಸಾಪ ತಾಲೂಕು ಅಧ್ಯಕ್ಷ ನಾಗರಾಜ್ ಮಸೂತಿ, ಶಿವಶಂಕರ್ ಇತರರಿದ್ದರು.
ಬಿಜೆಪಿ ಕಚೇರಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ, ಯುವ ಮೋರ್ಚಾ ಅಧ್ಯಕ್ಷ ಮೇಲಗಿರಿ ಬಸವರಾಜ, ಎಸ್ಸಿ ಮೋರ್ಚಾ ಅಧ್ಯಕ್ಷ ರಾಜಶೇಖರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೀರಭದ್ರಗೌಡ, ಪ್ರಮುಖರಾದ ಗುರಪ್ಪ, ಕವಡೆಕಾಯಿ ವೆಂಕಟೇಶ್, ಶರತ್ ಗೌಡ ಇದ್ದರು.