ಸಂಡೂರಿನಲ್ಲಿ ಮಾನವ ಹಕ್ಕುಗಳು ಹಾಗೂ ಪೋಕ್ಸೋ ಕಾಯ್ದೆಗಳ ಕುರಿತು ಆಯೋಜಿಸಿದ್ದ ಜನಜಾಗೃತಿ ಕಾರ್ಯಕ್ರಮವನ್ನು ಜೆಎಂಎಫ್‌ಸಿ ನ್ಯಾಯಾಧೀಶ ಮಹ್ಮದ್ ಶಾಯಿಜ್ ಚೌತಾಯಿ ಉದ್ಘಾಟಿಸಿದರು. ತಹಸೀಲ್ದಾರ್ ಅನಿಲ್ ಕುಮಾರ್, ಬಿಇಒ ಡಾ.ಐ.ಆರ್.ಅಕ್ಕಿ, ವಕೀಲರ ಸಂಘದ ಅಧ್ಯಕ್ಷ ಅರಳಿ ಮಲ್ಲಪ್ಪ ಇತರರಿದ್ದರು.
- ಹಿರಿಯ ವಕೀಲ ಟಿ.ಎಂ.ಶಿವಕುಮಾರ್ ಹೇಳಿಕೆ
- ಮಾನವ ಹಕ್ಕುಗಳು, ಪೋಕ್ಸೋ ಕಾಯ್ದೆ ಕುರಿತು ಜನಜಾಗೃತಿ ಕಾರ್ಯಕ್ರಮ
ಸಂಡೂರು: ಬಾಲಕಿಯರು-ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರೆ ಗರಿಷ್ಠ ಜೀವಾವಧಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಹಿರಿಯ ವಕೀಲ ಟಿ.ಎಂ.ಶಿವಕುಮಾರ್ ತಿಳಿಸಿದರು.
ಪಟ್ಟಣದ ಛತ್ರಪತಿ ಶಿವಾಜಿ ವಿದ್ಯಾಮಂದಿರದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಮಾನವ ಹಕ್ಕುಗಳು, ಪೋಕ್ಸೋ ಕಾಯ್ದೆ ಕುರಿತು ಶನಿವಾರ ಆಯೋಜಿಸಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜಕಾರಣಿಗಳು ಮತ್ತು ಪೊಲೀಸರಿಂದ ಸಾಮಾಜಿಕ, ಶೈಕ್ಷಣಿಕವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ಪ್ರಕರಣ ದಾಖಲಿಸಬಹುದು ಎಂದರು.
ಹಿರಿಯ ವಕೀಲ ಅಂಜಿನಪ್ಪ ಮಾತನಾಡಿ, ದೇಶಾದ್ಯಂತ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. 18 ವರ್ಷದೊಳಗಿನ ಬಾಲಕಿಯರು ಮೇಲೆ ದೌರ್ಜನ್ಯ ನಡೆದರೆ ಪೋಕ್ಸೋ ಕಾಯ್ದೆ ಪ್ರಕಾರ ಅಪರಾಧಿಗೆ ನ್ಯಾಯಾಲಯಗಳು ಶಿಕ್ಷೆ ಪ್ರಕಟಿಸುತ್ತವೆ ಎಂದರು.
ಜೆಎಂಎಫ್‌ಸಿ ನ್ಯಾಯಾಧೀಶ ಮಹ್ಮದ್ ಶಾಯಿಜ್ ಚೌತಾಯಿ, ತಹಸೀಲ್ದಾರ್ ಅನಿಲ್ ಕುಮಾರ್, ಬಿಇಒ ಡಾ.ಐ.ಆರ್.ಅಕ್ಕಿ, ಸಹಾಯಕ ಸರ್ಕಾರಿ ಅಭಿಯೋಜಕ ವಡ್ರ ಅಣ್ಣೇಶ, ವಕೀಲರ ಸಂಘದ ಅಧ್ಯಕ್ಷ ಅರಳಿ ಮಲ್ಲಪ್ಪ, ಉಪಾಧ್ಯಕ್ಷ ಕೆ.ಆರ್.ದಾದಾಪೀರ್, ಕಾರ್ಯದರ್ಶಿ ಎಚ್.ಕುಮಾರಸ್ವಾಮಿ, ಮಂಜುನಾಥ ಗೌಡ, ಮುಖ್ಯಶಿಕ್ಷಕ ವಿಶ್ವನಾಥ, ಡಿ.ನಾಗರಾಜ ಇತರರಿದ್ದರು.