ಬಳ್ಳಾರಿಯ ಭಾರತಿ ತೀರ್ಥ ಸಭಾಭವನದಲ್ಲಿ ಆಯೋಜಿಸಿದ್ದ ಆದ್ಯ ಗುರು ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಉದ್ಘಾಟಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ , ರಾಮಕೃಷ್ಣ ಆಶ್ರಮದ ಸ್ವಾಮಿ ಮಂಗಳನಾಥಾನಂದಜಿ ಮಹಾರಾಜ್, ಶೃಂಗೇರಿ ಶಂಕರಮಠದ ಮಠಾಧಿಕಾರಿ ಕೆ.ರವಿಶಾಸ್ತ್ರಿ, ಪಾಲಿಕೆ ಸದಸ್ಯೆ ಸುರೇಖಾ ಮಲ್ಲನಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಇತರರಿದ್ದರು. 
ಬಳ್ಳಾರಿ

ಸುಸ್ಥಿತಿಗೆ ಶಂಕರಾಚಾರ್ಯರ ಪಾತ್ರ ಪ್ರಮುಖ

ಪ್ರಮುಖ ಮುಖ್ಯಾಂಶಗಳು

  • ಪ್ರಮುಖ
ಬಳ್ಳಾರಿ : ಸಮಾಜ ಸುಸ್ಥಿತಿಗೆ ಕೊಂಡೊಯ್ಯುವಲ್ಲಿ ಆದಿ ಶಂಕರಾಚಾರ್ಯರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದರು.
ನಗರದ ಭಾರತಿ ತೀರ್ಥ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಮಂಗಳವಾರ ಆಯೋಜಿಸಿದ್ದ ಆದ್ಯ ಗುರು ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಮಠಗಳನ್ನು (ದಕ್ಷಿಣದ ಶೃಂಗೇರಿ, ಪಶ್ಚಿಮದ ದ್ವಾರಕಾ, ಪೂರ್ವದ ಪುರಿ ಜಗನ್ನಾಥ ಮತ್ತು ಉತ್ತರದ ಬದರಿನಾಥ) ಸ್ಥಾಪಿಸುವ ಮೂಲಕ ವೇದಾಂತದ ಪುನರುಜ್ಜೀವನ ಮತ್ತು ಹಿಂದೂ ಧರ್ಮದ ಏಕತೆ ಬಲಪಡಿಸಿದವರು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಮಾತನಾಡಿ, ಮಾನವನಲ್ಲಿ ದೇವರನ್ನು ಕಾಣುವುದೇ ಕಷ್ಟವಿರುವ ಕಾಲದಲ್ಲಿ, ಪ್ರತಿಯೊಬ್ಬ ವ್ಯಕ್ತಿಯ ಆತ್ಮದಲ್ಲೂ ಪರಮಾತ್ಮನಿದ್ದಾನೆ ಎಂದು ಸಾರಿದ ಆದಿ ಶಂಕರಾಚಾರ್ಯರ ಅದ್ವೈತ ಸಿದ್ಧಾಂತ ಜಗತ್ತಿಗೆ ಶ್ರೇಷ್ಠ ಕೊಡುಗೆಯಾಗಿದೆ ಎಂದು ಹೇಳಿದರು. ಬಳಿಕ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಮುದಾಯದವರನ್ನು ಗಣ್ಯರು ಸನ್ಮಾನಿಸಿದರು.
====