ಹರಪನಹಳ್ಳಿ ಜೈನ್ ಮಂದಿರ ಸಮೀಪದ ರಸಗೊಬ್ಬರ, ಬಿತ್ತನೆಬೀಜ ಸಂಗ್ರಹ ಕೇಂದ್ರಕ್ಕೆ ಜಂಟಿ ಕೃಷಿ ನಿರ್ದೇಶಕ ಡಿ.ಟಿ.ಮಂಜುನಾಥ್, ಉಪಕೃಷಿ ನಿರ್ದೇಶಕ ವಾಮದೇವ ಕೊಳ್ಳಿ ಹಾಗೂ ಸಹಾಯಕ ಕೃಷಿ ನಿರ್ದೇಶಕ ಮೊಹಮ್ಮದ್ ಆಶ್ರಪ್ ಹಾಗೂ ಕೃಷಿ ಅಧಿಕಾರಿ ಸಂಗಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲಿಸಿದರು. 
ಬಳ್ಳಾರಿ

ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ಷೋಕಾಸ್ ನೋಟಿಸ್

ಪ್ರಮುಖ ಮುಖ್ಯಾಂಶಗಳು

  • ಸರ್ಕಾರ
  • ನಿಗದಿ
  • ದರ
ಹರಪನಹಳ್ಳಿ: ನಗರದ ರಸಗೊಬ್ಬರ, ಬಿತ್ತನೆ ಬೀಜ ವಿತರಣಾ ಗ್ರೋಮರ್ ಕೇಂದ್ರಗಳಿಗೆ ಜಂಟಿ ಕೃಷಿ ನಿರ್ದೇಶಕರ ತಂಡವು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿನ ದರಕ್ಕೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ವಿತರಣೆ ಮಾಡದಂತೆ ಅಂಗಡಿಯ ಮಾಲೀಕರಿಗೆ ಜಂಟಿ ಕೃಷಿ ನಿರ್ದೇಶಕ ಡಿ.ಟಿ.ಮಂಜುನಾಥ್, ಉಪಕೃಷಿ ನಿರ್ದೇಶಕ ವಾಮದೇವ ಕೊಳ್ಳಿ ಹಾಗೂ ಸಹಾಯಕ ಕೃಷಿ ನಿರ್ದೇಶಕ ಮೊಹಮ್ಮದ್ ಅಶ್ರಪ್ ಅವರಿಗೆ ಸೂಚನೆ ನೀಡಿದರು.
ಪರಿಶೀಲನೆ ವೇಳೆ ಸರ್ಕಾರದ ನಿಯಮಾವಳಿ ಪ್ರಕಾರ ಕಡ್ಡಾಯವಾಗಿ ಪ್ರದರ್ಶಿಸಬೇಕಾದ ಬೆಲೆ ಮತ್ತು ದಾಸ್ತಾನು ವಿವರಗಳ ಫಲಕ (ಧರ ಪಟ್ಟಿ) ಹಾಕದೆ ಬೇಜವಾಬ್ದಾರಿ ಪ್ರದರ್ಶಿಸಿದ ಮಳಿಗೆಗಳ ಮಾಲೀಕರಿಗೆ ಅಧಿಕಾರಿಗಳು ತರಾಟೆಗೆ ತೆಗೆದುಕೊಂಡರು. ಅಲ್ಲದೆ, ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ಷೋಕಾಸ್ ನೋಟಿಸ್ ಜಾರಿ ಮಾಡಿದರು.