ಸಿರುಗುಪ್ಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದಡಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಟ್ಯೂಷನ್ ಕ್ಲಾಸ್ ಕಾರ್ಯಕ್ರಮವನ್ನು ಪ್ರಮುಖರು ಉದ್ಘಾಟಿಸಿದರು. ಯೋಜನೆಯ ಕಲ್ಯಾಣ ಕರ್ನಾಟಕ ವಿಭಾಗದ ಯೋಜನಾಧಿಕಾರಿ ಸುಧಾ ಗಾಂವ್ಕರ್, ಕ್ಷೇತ್ರ ಯೋಜನಾಧಿಕಾರಿ ಸುಧೀರ್ ಹಂಗಳೂರು, ಮುಖ್ಯಶಿಕ್ಷಕ ಶಿವಯೋಗಿ, ವಲಯ ಮೇಲ್ವಿಚಾರಕಿ ರೂಪಾ, ಜ್ಞಾನವಿಕಾಸ ಸಮನ್ವಯಾಧಿಕಾರಿ ಪ್ರಿಯಾ, ಸ್ಥಳೀಯ ಸೇವಾ ಪ್ರತಿನಿಧಿ ಅಂಬಿಕಾ ಇತರರಿದ್ದರು. 
ಬಳ್ಳಾರಿ

ಜ್ಞಾನವಿಕಾಸ ಶಿಷ್ಯವೇತನದಿಂದ ಅನುಕೂಲ

ಶ್ರೀನಾಥ

ಪ್ರಮುಖ ಮುಖ್ಯಾಂಶಗಳು

  • ಶಿಷ್ಯವೇತನ
ಜ್ಞಾನವಿಕಾಸ ಶಿಷ್ಯವೇತನದಿಂದ ಅನುಕೂಲ

ಯೋಜನಾಧಿಕಾರಿ ಸುಧಾ ಗಾಂವ್ಕರ್ ಹೇಳಿಕೆ

ಸಿರಗುಪ್ಪ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ದೇಶ-ವಿದೇಶಗಳಲ್ಲಿ ಹೆಸರುವಾಸಿಯಾಗಿದೆ ಎಂದು ಯೋಜನೆ ಕಲ್ಯಾಣ ಕರ್ನಾಟಕ ವಿಭಾಗದ ಯೋಜನಾಧಿಕಾರಿ ಸುಧಾ ಗಾಂವ್ಕರ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ಪಟ್ಟಣದ ಸ್ವಾಮಿ ವಿವೇಕಾನಂದ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಉಚಿತ ಟ್ಯೂಷನ್ ಕ್ಲಾಸ್ ಉದ್ಘಾಟಿಸಿ ಗುರುವಾರ ಮಾತನಾಡಿದರು. ಜ್ಞಾನದೀಪ ಶಾಲಾ ಶಿಕ್ಷಣ ಕಾರ್ಯಕ್ರಮದಡಿ 2025-26ನೇ ಸಾಲಿನ ಸಾಲಿನಲ್ಲಿ ರಾಜ್ಯದಲ್ಲಿ 4.25 ಕೋಟಿ ರೂ. ವೆಚ್ಚದಲ್ಲಿ 1,028 ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ. ಈವರೆಗೆ 10,234 ಗೌರವ ಶಿಕ್ಷಕರನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ ರಾಜ್ಯದ 508 ಶಾಲೆಗಳಿಗೆ 2.77 ಕೋಟಿ ರೂ. ಮೌಲ್ಯದ 4,064 ಡೆಸ್ಕ್‌ಗಳನ್ನು ಒದಗಿಸಿದ್ದು, ಇದರಿಂದ 20,320 ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಈವರೆಗೆ 11,621 ಪೀಠೋಪಕರಣಗಳನ್ನು ಒದಗಿಸಲಾಗಿದೆ. ಯೋಜನೆ ಪಾಲುದಾರ ಕುಟುಂಬಗಳ ಮಕ್ಕಳಿಗೆ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗುವಂತೆ ಈತನಕ ಒಟ್ಟು 1,17,934 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗಿದೆ ಎಂದು ಮಾಹಿತಿ ನೀಡಿದರು.