ಹಗರಿಬೊಮ್ಮನಹಳ್ಳಿ ತಾಪಂ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಸೊನ್ನದ ಗುರುಬಸವರಾಜ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಜಂದಿಸಾಬ್, ಸದಸ್ಯ ಪರಶುರಾಮ ಹೆಗ್ಡಾಳ್, ತಾಪಂ ಇಒ ಪಾಲಯ್ಯನಕೋಟೆ ವಿಶ್ವನಾಥ ಇತರರಿದ್ದರು.
- ಸೊನ್ನದ ಗುರುಬಸವರಾಜ ಮಾಹಿತಿ
- ಹಗರಿಬೊಮ್ಮನಹಳ್ಳಿ ಗ್ಯಾರಂಟಿ ತಾಲೂಕು ಸಭೆ
ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹರಿಗೆ ವ್ಯವಸ್ಥಿತವಾಗಿ ತಲುಪುತ್ತಿದ್ದು, ಮುಂದಿನ ದಿನಗಳಲ್ಲೂ ಲೋಪಗಳಾಗದಂತೆ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಗ್ಯಾರಂಟಿ ತಾಲೂಕು ಸಮಿತಿ ಅಧ್ಯಕ್ಷ ಸೊನ್ನದ ಗುರುಬಸವರಾಜ ಸೂಚಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು. ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಂಡ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ ತರಬೇತಿ ನೀಡಿ, ವಿವಿಧ ಕಂಪನಿ, ಫ್ಯಾಕ್ಟರಿ, ಸಂಸ್ಥೆಗಳಲ್ಲಿ ಉದ್ಯೋಗದ ಭರವಸೆ ನೀಡುವ ಸಮಾವೇಶವನ್ನು ಮುಂದಿನ ದಿನಗಳಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಸಿಡಿಪಿಒ, ಸಾರಿಗೆ ಇಲಾಖೆ, ಆಹಾರ ಇಲಾಖೆ, ಜೆಸ್ಕಾಂ ಹಾಗೂ ಉದ್ಯೋಗಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಪ್ರಗತಿ ವರದಿ ಮಂಡಿಸಿದರು.
ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಜಂದಿಸಾಬ್, ಸದಸ್ಯ ಪರಶುರಾಮ ಹೆಗ್ಡಾಳ್, ತಾಲೂಕು ಸಮಿತಿ ಸದಸ್ಯರಾದ ರಾಘವೇಂದ್ರ, ಮೇಟಿ ಮಂಜುನಾಥ, ಗಿರೀಶ್, ವೆಂಕಟೇಶ್ ನಾಯ್ಕ, ಎ.ಸಂತೋಷ, ಸರ್ದಾರ್ ರಾಮಣ್ಣ, ಪ್ರಕಾಶ್ ಉಪ್ಪಾರ್, ಸದ್ದಾಂ, ದೊಡ್ಡಬಸಪ್ಪ, ನಾಗಮ್ಮ, ತಾಪಂ ಇಒ ಪಾಲಯ್ಯನಕೋಟೆ ವಿಶ್ವನಾಥ, ಯೋಜನಾಧಿಕಾರಿ ನಾಗರಾಜ ನಾಯ್ಕ, ಲಕ್ಷ್ಮೀ ಇದ್ದರು.