ಸಂಡೂರಿನ ಬೊಮ್ಮಘಟ್ಟ ಗ್ರಾಮದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರವನ್ನು ಶಾಸಕಿ ಅನ್ನಪೂರ್ಣ ತುಕಾರಾಮ್ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್.ಅಕ್ಕಿ, ಸನ್ಮಾರ್ಗ ಗೆಳೆಯರ ಬಳಗದ ಮೆಹತಾಬ್, ಚಂದ್ರಶೇಖರ್ ಆಚಾರ್, ಮುಖ್ಯಶಿಕ್ಷಕ ವಿ.ಹನುಮಂತಪ್ಪ ಇತರರಿದ್ದರು. 
ಬಳ್ಳಾರಿ

ಎಸ್ಸೆಸ್ಸೆಲ್ಸಿ ಫಲಿತಾಂಶ ಭದ್ರ ಬುನಾದಿ

ಗಾಯತ್ರಿ ಮಾಲಿಪಾಟೀಲ್

ಪ್ರಮುಖ ಮುಖ್ಯಾಂಶಗಳು

  • ಮೂಲ ಸೌಕರ್ಯ
  • ಅತಿಥಿ ಶಿಕ್ಷಕ

ಎಸ್ಸೆಸ್ಸೆಲ್ಸಿ ಫಲಿತಾಂಶ ಭದ್ರ ಬುನಾದಿ

ಸಂಡೂರು: ತಾಲೂಕಿನ ಎಲ್ಲ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಶಿಕ್ಷಕರ ಕೊರತೆಯಿರುವ ಶಾಲೆಗಳಲ್ಲಿ ಮಕ್ಕಳಿಗೆ ಅನುಗುಣವಾಗಿ ಅತಿಥಿ ಶಿಕ್ಷಕರನ್ನು ಇಲಾಖೆಯಿಂದ ನೇಮಕ ಮಾಡಲಾಗಿದೆ ಎಂದು ಶಾಸಕಿ ಅನ್ನಪೂರ್ಣ ತುಕಾರಾಮ್ ಹೇಳಿದರು.
ಬೊಮ್ಮಘಟ್ಟ ಗ್ರಾಮದ ಹುಲಿಕುಂಟರಾಯ ದೇವಸ್ಥಾನದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಬಳ್ಳಾರಿಯ ಸನ್ಮಾರ್ಗ ಗೆಳೆಯರ ಬಳಗದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರದಲ್ಲಿ ಮಾತನಾಡಿದರು.
ಮಕ್ಕಳ ಶೈಕ್ಷಣಿಕ ಪ್ರಗತಿ, ಫಲಿತಾಂಶ ಸುಧಾರಣೆಗೆ ಅಗತ್ಯ ಸಹಾಯ, ಸಹಕಾರ ನೀಡಲು ಬದ್ಧನಾಗಿದ್ದೇನೆ. ಎಸ್ಸೆಸ್ಸೆಲ್ಸಿ ಫಲಿತಾಂಶ ವಿದ್ಯಾರ್ಥಿಗಳಿಗೆ ಭದ್ರ ಬುನಾದಿಯಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್.ಅಕ್ಕಿ ಮಾತನಾಡಿ, ಈ ಬಾರಿ ತಾಲೂಕಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಶೇ.90ಕ್ಕಿಂತ ಹೆಚ್ಚು ಸಾಧಿಸುವ ಗುರಿ ಹೊಂದಲಾಗಿದೆ.
ಅದಕ್ಕೆ ತಕ್ಕಂತೆ ತಾಲೂಕಿನ ಎಲ್ಲ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿ, ಸಂಜೆ ಗುಂಪು ಅಧ್ಯಯನ ತರಗತಿ, ವೇಕ್‌ಅಪ್ ಕಾಲ್, ದತ್ತು ಯೋಜನೆ, ಮಿಷನ್ 40+, ಇಲಾಖೆಯ 29 ಅಂಶಗಳ ಕಾರ್ಯಕ್ರಮದ ಸಮರ್ಪಕ ಅನುಷ್ಠಾನ, ಬಿಇಒ, ಬಿಆರ್‌ಸಿ ಇಸಿಒ ತಂಡದ ಮತ್ತು ಶಿಕ್ಷಕರ ಮನೆ ಮನೆಗೆ ಭೇಟಿ, ರಾಜ್ಯದ ವಿವಿಧ ಭಾಗಗಳ ಸಂಪನ್ಮೂಲ ವ್ಯಕ್ತಿಗಳಿಂದ ನಿರಂತರ ವಿಶೇಷ ಮಾರ್ಗದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸನ್ಮಾರ್ಗ ಗೆಳೆಯರ ಬಳಗದ ಮೆಹತಾಬ್, ಚಂದ್ರಶೇಖರ್ ಆಚಾರ್, ಮುಖ್ಯಶಿಕ್ಷಕ ವಿ.ಹನುಮಂತಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಂಗಿ ನಾಗರಾಜ, ಸಂಪನ್ಮೂಲ ವ್ಯಕ್ತಿಗಳಾದ ಹರಿಪ್ರಸಾದ್, ಪುರುಷೋತ್ತಮ್, ಸಿದ್ದಲಿಂಗೇಶ್, ಪ್ರಮುಖರಾದ ಅಮರೇಶ್ ಸೊನ್ನದ, ರಾಜಕುಮಾರ್, ರಮೇಶ್, ಷಣ್ಮುಖರಾವ್, ಮಹೇಶ್ವರಪ್ಪ, ಎಚ್.ಡಿ.ಸಿದ್ದೇಶ್, ಪಾಲಾಕ್ಷಪ್ಪ, ರಘುಪತಿ ಇತರರಿದ್ದರು.