ಕೂಡ್ಲಿಗಿಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಬಣದ ಪದಾಧಿಕಾರಿಗಳು ತಹಸೀಲ್ದಾರ್ ವಿ.ಕೆ.ನೇತ್ರಾವತಿಗೆ ಮನವಿ ಸಲ್ಲಿಸಿದರು. ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ, ಪ್ರಧಾನ ಕಾರ್ಯದರ್ಶಿ ಪಿ.ಟಿ.ತಿಪ್ಪೇಸ್ವಾಮಿ, ಜಿಲ್ಲಾಧ್ಯಕ್ಷ ಬಣಕಾರ ಬಸವರಾಜ, ತಾಲೂಕು ಅಧ್ಯಕ್ಷರಾದ ಕೂಡ್ಲಿಗಿ ಜೆ.ಮಾರಪ್ಪ, ಹೊಸಪೇಟೆ ಶೇಖಪ್ಪ ಇದ್ದರು. 
ಬಳ್ಳಾರಿ

ಖರೀದಿ ಕೇಂದ್ರ ಆರಂಭಿಸಿ ಬೆಂಬಲ ಬೆಲೆ ನೀಡಿ

ಶಾಮಸುಂದರ್ ಕೊಪ್ಪಳಕರ್

ಪ್ರಮುಖ ಮುಖ್ಯಾಂಶಗಳು

  • ರೈತ ಸಂಘ, ಹಸಿರು ಸೇನೆ ಒತ್ತಾಯ
  • ತಹಸೀಲ್ದಾರ್ ವಿ.ಕೆ.ನೇತ್ರಾವತಿಗೆ ಮನವಿ
ಕೂಡ್ಲಿಗಿ: ಆರ್‌ಆರ್ ಸಂಖ್ಯೆ ಇಲ್ಲದ ಎಲ್ಲ ರೈತರ ಪಂಪ್ ಸೆಟ್‌ಗಳನ್ನು ಸಕ್ರಮಗೊಳಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಬಣದ ಪದಾಧಿಕಾರಿಗಳು ಶುಕ್ರವಾರ ತಹಸೀಲ್ದಾರ್ ವಿ.ಕೆ.ನೇತ್ರಾವತಿಗೆ ಮನವಿ ಸಲ್ಲಿಸಿದರು.
ರೈತರ ಜಮೀನುಗಳಲ್ಲಿ ಸಮರ್ಪಕವಾಗಿ ಜಿಪಿಎಸ್ ಸರ್ವೇ ಮಾಡಬೇಕು. ತಾಲೂಕು ಹಾಗೂ ಹೋಬಳಿಯಲ್ಲಿ ಖರೀದಿ ಕೇಂದ್ರ ಆರಂಭಿಸಿ ಎಲ್ಲ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ತೋಟಗಾರಿಕೆ ಇಲಾಖೆಯಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ರೈತರಿಗೆ ತಲುಪಿಸಬೇಕು. ತಾಲೂಕಿನಲ್ಲಿ ನಿಯಮ ಉಲ್ಲಂಘಿಸಿ ಕಾಮಗಾರಿ ನಡೆಸುತ್ತಿರುವ ವಿಂಡ್, ಸೋಲಾರ್ ಪವರ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ವೈಜ್ಞಾನಿಕ ಹೆದ್ದಾರಿ ಕಾಮಗಾರಿ ಕೈಗೊಂಡು ಅಗತ್ಯ ಸ್ಥಳಗಳಲ್ಲಿ ಸೇವಾ ರಸ್ತೆ ಹಾಗೂ ಫ್ಲೈಒವರ್ ನಿರ್ಮಿಸಬೇಕು. ಎಫ್‌ಡಿಐ ಮೂಲಕ ಗೊಬ್ಬರ ವಿತರಣೆ ಬಿಟ್ಟು ಹಿಂದಿನ ಆದೇಶದಂತೆ ನೀಡಬೇಕು. ಅರಣ್ಯದ ಪಕ್ಕದ ಜಮೀನುಗಳಲ್ಲಿ ಬೆಳೆದ ಬೆಳೆಗಳಿಗೆ ಕಾಡು ಪ್ರಾಣಿಗಳಿಂದ ಉಂಟಾಗುವ ನಷ್ಟವನ್ನು ಸರ್ಕಾರವೇ ನೀಡಬೇಕು. ಕೃಷಿ ಇಲಾಖೆಯಿಂದ ನಿರ್ವಹಿಸುವ ಬೀಜ, ಗೊಬ್ಬರ, ಔಷಧ ಹಾಗೂ ಪರಿಕರ ವಿರತಣೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ರೈತರಿಗೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ತೇಜವರ್ಧನ್, ರಾಜ್ಯ ರೈತ ಸಂಘದ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ, ಪ್ರಧಾನ ಕಾರ್ಯದರ್ಶಿ ಪಿ.ಟಿ.ತಿಪ್ಪೇಸ್ವಾಮಿ, ಜಿಲ್ಲಾಧ್ಯಕ್ಷ ಬಣಕಾರ ಬಸವರಾಜ, ತಾಲೂಕು ಅಧ್ಯಕ್ಷರಾದ ಕೂಡ್ಲಿಗಿ ಜೆ.ಮಾರಪ್ಪ, ಹೊಸಪೇಟೆ ಶೇಖಪ್ಪ, ಜಗಳೂರು ಚಿರಂಜೀಬಿ, ಸಂಘಟನಾ ಅಧ್ಯಕ್ಷ ಟಿ.ಎಂ.ಬಾಲರಾಜ, ಪ್ರಧಾನ ಕಾರ್ಯದರ್ಶಿ ಜಗದೀಶ್ ಸ್ವಾಮಿ, ಕಾರ್ಯದರ್ಶಿ ವೀರೇಂದ್ರ ಪಾಟೀಲ್, ಗೌರವಧ್ಯಕ್ಷ ಯು.ನಾಗರಾಜ, ಉಪಾಧ್ಯಕ್ಷ ಕೆ.ಮಂಜುನಾಥ, ಹೊಸಹಳ್ಳಿ ಹೋಬಳಿ ಘಟಕದ ಅಧ್ಯಕ್ಷ ಎಳನೀರು ಮಂಜುನಾಥ, ಪ್ರಧಾನ ಕಾರ್ಯದರ್ಶಿ ಕೆ.ಎಂ.ನಾಗರಾಜ, ಸಂಚಾಲಕ ಪಿ.ಅಜ್ಜಣ್ಣ ಇತರರಿದ್ದರು.