ಟಿ.ದುರುಗಪ್ಪ 
ಬಳ್ಳಾರಿ

ಟಿ.ದುರುಗಪ್ಪಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ

ಎಸ್.ಎರ್ರಿಸ್ವಾಮಿ

ಪ್ರಮುಖ ಮುಖ್ಯಾಂಶಗಳು

  • ಸುದೀರ್ಘ ಬೋಧನಾ ಅನುಭವ
ಬಳ್ಳಾರಿ : ಜಿಲ್ಲೆಯ ಸಿರಗುಪ್ಪ ತಾಲೂಕಿನ ಕೊಂಚಿಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಟಿ.ದುರುಗಪ್ಪ ಅವರು ಪ್ರಸಕ್ತ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಳೆದ ಐದು ವರ್ಷಗಳಿಂದ ಕೊಂಚಿಗೇರಿ ಶಾಲೆಯಲ್ಲಿ ಮುಖ್ಯಗುರುವಾಗಿ ಸೇವೆ ಸಲ್ಲಿಸಿ ಶಾಲೆ ಮತ್ತು ಶಿಕ್ಷಣದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಪ್ರಸ್ತುತ ಹದಿನೇಳು ವರ್ಷಗಳ ಸುದೀರ್ಘ ಬೋಧನಾ ಅನುಭವ ಹೊಂದಿದ್ದು, ಈ ಮುನ್ನ ತಾಲೂಕಿನ ಸಿರಿಗೇರಿ ಗ್ರಾಮದಲ್ಲಿ ಎಂಟು ವರ್ಷಗಳ ಕಾಲ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ (ಸಿಆರ್‌ಪಿ) ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು.
ಮೂಲತಃ ತಾಲೂಕಿನ ಮುದ್ದಟ್ಟನೂರು ಗ್ರಾಮದವರಾದ ದುರುಗಪ್ಪ ಅವರ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಈಗಾಗಲೇ ಜಿಲ್ಲಾದ್ಯಂತ ಹಲವು ಸಂಘ-ಸಂಸ್ಥೆಗಳು ನಾನಾ ಪ್ರಶಸ್ತಿ ನೀಡಿ ಗೌರವಿಸಿವೆ. ಇದೀಗ ಅವರಿಗೆ ರಾಜ್ಯಮಟ್ಟದ ಗೌರವ ಒಲಿದು ಬಂದಿರುವುದು ತಾಲೂಕಿಗೆ ಹಾಗೂ ಜಿಲ್ಲೆಗೆ ಹೆಮ್ಮೆ ತಂದಿದೆ.