ಹೂವಿನಹಡಗಲಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಬಿಇಒ ಮಹೇಶ್ ಪೂಜಾರ್, ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಕ್ಷೇತ್ರಸಮನ್ವಯಾಧಿಕಾರಿ ಎ.ಕೋಟೆಪ್ಪ ಇತರರಿದ್ದರು. 
ಬಳ್ಳಾರಿ

ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಕ್ರಮ

ಗಾಯತ್ರಿ ಮಾಲಿಪಾಟೀಲ್

ಪ್ರಮುಖ ಮುಖ್ಯಾಂಶಗಳು

  • ಉತ್ತಮ ಭವಿಷ್ಯ

ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಕ್ರಮ

ಹೂವಿನಹಡಗಲಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಲಿಕಾ ಹಂತದಲ್ಲೇ ಸಾಧನೆ ಕಡೆಗೆ ಗಮನ ಹರಿಸಬೇಕು. ಶಾಲೆಯಲ್ಲಿ ಹಿಂದುಳಿದ ಮಕ್ಕಳನ್ನು ಗಮನಿಸಿ ಶಿಕ್ಷಕರು ಓದಿನಲ್ಲಿ ಆಸಕ್ತಿ ಮೂಡಿಸಿದರೆ ವಿದ್ಯಾರ್ಥಿಗಳು ಸಾಧನೆ ಮಾಡಲು ಅನುಕೂಲವಾಗುತ್ತದೆ ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸರ್ಕಾರಿ ನೌಕರರ ಸಂಘ ಹಾಗೂ ಇತರ ಸಂಘಟನೆಗಳ ಸಹಯೋಗದಲ್ಲಿ ಪಟ್ಟಣದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು.
ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಒದಗಿಸಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಒತ್ತು ನೀಡಲಾಗುತ್ತಿದೆ. ಇದರಿಂದಾಗಿ ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಾಲೂಕು ಪ್ರಥಮ ಸ್ಥಾನ ಪಡೆದಿದೆ.
ಖಾಸಗಿ ಶಾಲೆಗಳೊಂದಿಗೆ ಸರ್ಕಾರಿ ಶಾಲೆಗಳು ಪೈಪೋಟಿ ನಡೆಸಿ ಸಾಧನೆ ಮಾಡಿ ರಾಜ್ಯ ಮಟ್ಟದಲ್ಲಿ ಗುರುತಿಸುವಲ್ಲಿ ಶಿಕ್ಷಕರ ಶ್ರಮ ಮುಖ್ಯವಾಗಿದೆ ಎಂದರು.
ಬಿಇಒ ಮಹೇಶ್ ಪೂಜಾರ್, ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ತಾಲೂಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ಕೊಟ್ರಗೌಡ, ಕ್ಷೇತ್ರ ಸಮನ್ವಯಾಧಿಕಾರಿ ಕೋಟೆಪ್ಪ, ದೈಹಿಕ ಶಿಕ್ಷಣ ಅಧೀಕ್ಷಕ ಮಹಮದ್ ರಫಿ, ಸಿಡಿಪಿಒ ರಾಮನಗೌಡ, ಪ್ರಮುಖರಾದ ಎಂ.ಪಿ.ಎಂ.ಅಶೋಕ, ಚಂದ್ರಪ್ಪ, ನಂಜುಂಡಪ್ಪ, ವಾರದ ಗೌಸ್ ಮೋಹಿದ್ದೀನ್, ವಿ.ಬಿ.ಜಗದೀಶ ಇತರರಿದ್ದರು.