ಹಾರಕಬಾವಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಮನೆ ಮನೆಗೆ ಶಾಸಕರು, ಮನೆ ಬಾಗಿಲಿಗೆ ಸರ್ಕಾರ ಕಾರ್ಯಕ್ರವನ್ನು ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಉದ್ಘಾಟಿಸಿದರು. ಎಪಿಎಂಸಿ ಅಧ್ಯಕ್ಷ ಕುರಿಹಟ್ಟಿ ಬೋಸಣ್ಣ, ಎಚ್.ಶೇಖರಪ್ಪ, ತಹಸೀಲ್ದಾರ್ ವಿ.ಕೆ.ನೇತ್ರಾವತಿ, ತಾಪಂ ಇಒ ನರಸಪ್ಪ, ಜಿಪಂ ಎಇಇ ಮಲ್ಲಿಕಾರ್ಜುನ, ವೆಂಕಟೇಶ್ ಇದ್ದರು.
- 2 ಸಾವಿರ
- ಕೋಟಿ ರೂ.
- ಅನುದಾನದಲ್ಲಿ
ಕಾನಹೊಸಹಳ್ಳಿ: ಗ್ರಾಮೀಣರ ಸಮಸ್ಯೆಗಳಿಗೆ ಸ್ಪಂದಿಸುವುದಕ್ಕಾಗಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಮನೆ ಮನೆಗೆ ಶಾಸಕರು, ಮನೆ ಬಾಗಿಲಿಗೆ ಸರ್ಕಾರ ಎನ್ನುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ತಿಳಿಸಿದರು.
ಹಾರಕಬಾವಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಮನೆ ಮನೆಗೆ ಶಾಸಕರು, ಮನೆ ಬಾಗಿಲಿಗೆ ಸರ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರ ಸಾಕಷ್ಟು ಸಮಸ್ಯೆಗಳ ಜತೆಗೆ
ಅಭಿವೃದ್ಧಿಯಿಂದ ಹಿಂದುಳಿದಿರುವುದನ್ನು ಮನಗಂಡಿದ್ದೇನೆ. ಹೀಗಾಗಿ, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಎರಡು ಸಾವಿರ ಕೋಟಿಗೂ ಅಧಿಕ ಅನುದಾನತಂದು ಪ್ರಗತಿಗೆ ಮುಂದಾಗಿದ್ದೇನೆ. ಹಾರಕಬಾವಿ ಗ್ರಾಪಂ ವ್ಯಾಪ್ತಿಯ ಭಿಷ್ಣಹಳ್ಳಿ, ಬೆಳಕಟ್ಟೆ, ಬೆಳಕಟ್ಟೆ ಗೊಲರಹಟ್ಟಿ, ಶಾಂತನಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಇದೇ ರೀತಿ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ವಸತಿ, ರಸ್ತೆ, ವಿದ್ಯುತ್ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಎಪಿಎಂಸಿ ಅಧ್ಯಕ್ಷ ಕುರಿಹಟ್ಟಿ ಬೋಸಣ್ಣ, ಎಚ್.ಶೇಖರಪ್ಪ, ಎಚ್.ಮಹೇಶ್. ಬಳೇಗೆರ್ ಜಗದೀಶ್, ನಿವೃತ್ತ ಪ್ರಾಚಾರ್ಯ ಜಂಬುನಾಥ, ಕಂಪಾಳಿ ಈಶ್ವರಪ್ಪ, ಕೋಟ್ರೇಶ್, ಮೂಗಣ್ಣ, ಮಾಯಣ್ಣ, ತಹಸೀಲ್ದಾರ್ ವಿ.ಕೆ. ನೇತ್ರಾವತಿ, ತಾಪಂ ಇಒ ನರಸಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ವೆಂಕಟೇಶ್, ತಾಲೂಕು ಮಟ್ಟದ ಅಧಿಕಾರಿಗಳಾದ ಜಿಪಂ ಎಇಇ ಮಲ್ಲಿಕಾರ್ಜುನ, ಶ್ಯಾಮಪ್ಪ, ಸಂದೀಪನಾಯಕ, ತಳವಾರ ಶರಣಪ್ಪ, ಜೆಸ್ಕಾಂ ಜೆಇ ಆನಂದ, ಪಿಡಿಒ ಭರತ್‌ಕುಮಾರ್ ಇತರರಿದ್ದರು.