ಕೂಡ್ಲಿಗಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದ ವಿದ್ಯಾರ್ಥಿ ಕರಿಯಪ್ಪ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.
- ಕುಂಬಿ ಮೇಲೆ ಮೊಬೈಲ್ ನೋಡುತ್ತಿದ್ದ
- ಕೂಡ್ಲಿಗಿ ಪ.ಪಂಗಡ ವಸತಿ ನಿಲಯ
ಕೂಡ್ಲಿಗಿ: ಪಟ್ಟಣದ ಪರಿಶಿಷ್ಟ ಪಂಗಡ ಮೆಟ್ರಿಕ್ ನಂತರದ ವಸತಿ ನಿಲಯ ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿ ಶುಕ್ರವಾರ ಗಾಯಗೊಂಡಿದ್ದಾನೆ.
ಕರಡಿಹಳ್ಳಿ ಗ್ರಾಮದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕರಿಯಪ್ಪ ಗಾಯಾಳು. ಕಟ್ಟಡದ ಕುಂಬಿ ಮೇಲೆ ಕುಳಿತು ಮೊಬೈಲ್ ನೋಡುತ್ತಿದ್ದಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ.
ತಕ್ಷಣ ವಿದ್ಯಾರ್ಥಿಗಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆನ್ನಿಗೆ ಗಾಯಗಳಾಗಿದ್ದು, ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ. ಎರಡ್ಮೂರು ದಿನಗಳ ಚಿಕಿತ್ಸೆ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆಂದು ತಾಲೂಕು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಅಧಿಕಾರಿ ಮೆಹಬೂಬ್ ಬಾಷಾ ಅರಸೀಕೆರೆ ತಿಳಿಸಿದ್ದಾರೆ.