ಗ್ರಾಮದಲ್ಲಿ ಮೂಲಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಸಿರಿಗೇರಿ ಗ್ರಾಪಂ ಕಾರ್ಯದರ್ಶಿ ಸಿದ್ದರಾಮಗೆ ಕೆಆರ್‌ಎಸ್ ಪಕ್ಷದಿಂದ ಮನವಿ ಸಲ್ಲಿಸಲಾಯಿತು. ತಾಲೂಕು ಅಧ್ಯಕ್ಷ ಎರ‌್ರಿಸ್ವಾಮಿ, ಪದಾಧಿಕಾರಿಗಳಾದ ಮರೆಪ್ಪ, ಸಣ್ಣ ಬಾಷಾ, ರಾಮಪ್ಪ, ಚಂದ್ರ, ಇಮಾಮ್ ಹುಸೇನ್, ನಾಗಪ್ಪ, ಮಹಬಾಷಾ, ಗಂಗಾಧರ, ರಾಮಚಂದ್ರ, ರಾಮಪ್ಪ, ನಾಗರಾಜ, ಸೋಮೇಶ ಇದ್ದರು. 
ಬಳ್ಳಾರಿ

ಸಿರಿಗೇರಿಯಲ್ಲಿ ರಸ್ತೆ ದುರಸ್ತಿಗೆ ಕ್ರಮವಹಿಸಿ

ಸಿರಿಗೇರಿ: ಗ್ರಾಮದಲ್ಲಿ ಮೂಲಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಗ್ರಾಪಂ ಕಾರ್ಯದರ್ಶಿ ಸಿದ್ಧರಾಮಗೆ ಸೋಮವಾರ ಮನವಿ ಸಲ್ಲಿಸಿದರು.
ಗ್ರಾಪಂ ಸಿಬ್ಬಂದಿ ನಿಗದಿತ ವೇಳೆಗೆ ಕೆಲಸಕ್ಕೆ ಹಾಜರಾಗುತ್ತಿಲ್ಲ. ಬೇಸಿಗೆ ಹಿನ್ನೆಲೆಯಲ್ಲಿ ಕುಡಿವ ನೀರಿನ ಸಮಸ್ಯೆಯಿಂದ ಗ್ರಾಮಸ್ಥರಿಗೆ ಸಂಕಷ್ಟ ಎದುರಾಗಿದೆ. ಒಳ ಚರಂಡಿ ವ್ಯವಸ್ಥೆಯಿಲ್ಲದಿರುವುದರಿಂದ ಗ್ರಾಮದ ಬಹುತೇಕ ಬೀದಿಗಳಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿದು ದುರ್ವಾಸನೆ ಬರುತ್ತಿದೆ. ಇದರಿಂದಾಗಿ ರೋಗಗಳು ಹರಡುವ ಸಾಧ್ಯತೆಯಿದೆ. ಗ್ರಾಮದ ಬಹುತೇಕ ರಸ್ತೆಗಳು ಹಾಳಾಗಿದ್ದು, ಕೂಡಲೇ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿದರು.
ಗ್ರಾಪಂ ಕಾರ್ಯದರ್ಶಿ ಸಿದ್ಧರಾಮ ಮಾತನಾಡಿ, ಈಗಾಗಲೇ ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಕ್ರಿಯಾಯೋಜನೆ ರೂಪಿಸಲಾಗಿದೆ. ರಸ್ತೆ ದುರಸ್ತಿ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.